ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಚೀನಾ ಆಘಾತಕಾರಿ ನಿರ್ಧಾರವನ್ನು ಕೈಗೊಂಡಿದೆ. (ಸಾಂದರ್ಭಿಕ ಚಿತ್ರ)
2/ 7
ಕಳೆದ ಮೂರು ವರ್ಷಗಳಿಂದ ದೈನಂದಿನ ಕೋವಿಡ್ -19 ಪ್ರಕರಣಗಳ ಅಂಕಿಅಂಶಗಳನ್ನು ಪ್ರಕಟಿಸುತ್ತಿದ್ದ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಇನ್ಮೇಲೆ ಯಾವುದೇ ವರದಿ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಸದ್ಯ ಚೀನಾದಲ್ಲಿ ಪ್ರತಿದಿನ 10 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ಅಲ್ಲದೇ ಒಂದೇ ದಿನ 5 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಮೃತಪಡುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
ಕೊರೊನಾ ಪ್ರಕರಣಗಳನ್ನು ಹತ್ತಿಕ್ಕಲು ಚೀನಾ ಸರ್ಕಾರ ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂಬ ಆಕ್ಷೇಪಣೆಗಳು ಕೇಳಿಬರುತ್ತಿವೆ. (ಸಾಂದರ್ಭಿಕ ಚಿತ್ರ)
5/ 7
ಚೀನಾದಲ್ಲಿ ಕೋವಿಡ್-19 ರ ಒಮಿಕ್ರಾನ್ ರೂಪಾಂತರದ ಉಪ-ರೂಪಾಂತರ BF.7 ಹಾನಿಯನ್ನುಂಟುಮಾಡುತ್ತಿದೆ. ರಸ್ತೆಗಳಿಗಿಂತ ಆಸ್ಪತ್ರೆಗಳು ಹೆಚ್ಚು ಜನಸಂದಣಿಯಿಂದ ಕೂಡಿವೆ. (ಸಾಂದರ್ಭಿಕ ಚಿತ್ರ)
6/ 7
ಚೀನಾದಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಜಾಗವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ನೆಲದ ಮೇಲೆ ಮಲಗಿ ಚಿಕಿತ್ಸೆ ಪಡೆಯಬೇಕಾದ ಸ್ಥಿತಿ ಚೀನಾದಲ್ಲಿದೆ. (ಸಾಂದರ್ಭಿಕ ಚಿತ್ರ)
7/ 7
ಮುಂದಿನ ದಿನಗಳಲ್ಲಿ ಚೀನಾದಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)