PHOTOS : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ದೇಶಾದ್ಯಂತ ಪ್ರತಿಭಟನೆ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯ ಕಾವು ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಪೊಲೀಸರ ಅನುಮತಿಯಿಲ್ಲದೇ ನೂರಾರು ಕಾರ್ಯಕರ್ತರೊಂದಿಗೆ ಜಾಮಾ ಮಸೀದಿಯಿಂದ ಜಂತರ್ ಮಂತರ್ವರೆಗೂ ಆಜಾದ್ ಪ್ರತಿಭಟನಾ ಮೆರವಣಿಗೆಯಲ್ಲಿ ಆಜಾದ್ ಪಾಲ್ಗೊಂಡರು. ಈ ವೇಳೆ ಜಾಮಾ ಮಸೀದಿ ಬಳಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರ ಪ್ರಯತ್ನ ವಿಫಲವಾಯಿತು. ಆದರೆ, ದಾರ್ಯಾಗಂಜ್ ಬಳಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಆರಂಭದಲ್ಲಿ ಈಶಾನ್ಯ ಭಾರತ ದೆಹಲಿ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದ ಹೋರಾಟ ಇದೀಗ ಇಡೀ ರಾಷ್ಟ್ರದಾದ್ಯಂತ ವ್ಯಾಪಿಸಿದೆ. ಹೋರಾಟದ ಕಿಚ್ಚು ದೆಹಲಿಯಿಂದ ದಕ್ಷಿಣ ಭಾರತದವರೆಗೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಬೆಂಗಳೂರಿನಲ್ಲೂ ಪರಿಸ್ಥಿತಿ ಈಗ ಕಾವೇರಿದೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಲ್ಲದೆ, ಪ್ರತಿಭಟನೆ ವೇಳೆ ಹಿಂಸಾಚಾರ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.