ಗಜ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ಜನಜೀವನ ತತ್ತರ

ತಮಿಳುನಾಡಿನಲ್ಲಿ ಗಜ ಚಂಡಮಾರುತದ ಅಬ್ಬರ ಜೋರಾಗಿದೆ. ನಿನ್ನೆ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸಿದ್ದು, ನಾಗಪಟ್ಟಿನಂ, ತಿರುವಾವೂರು ಹಾಗೂ ತಂಜಾವೂರಿನಲ್ಲಿ ಭಾರೀ ಮಳೆಯಿಂದ ಮರಗಳು ಧರೆಗುರುಳಿವೆ. ಸುಮಾರು 500ಕ್ಕೂ ಹೆಚ್ಚು ಮರಗಳು ನೆರಕ್ಕುರುಳಿವೆ. ಇಂದೂ ಕೂಡ ಮಳೆ ಮುಂದುವರೆದಿದ್ದು, ನಾಗಪಟ್ಟಿನಂ, ಕಡಲೂರು, ಪುದುಕೊಟ್ಟೈ ಹಾಗೂ ರಾಮನಾಥಪುರಂ ಜಿಲ್ಲೆಗಳಲ್ಲಿ ವಿದ್ಯುತ್​ ಪುರೈಕೆಯಲ್ಲಿ ವ್ಯತ್ಯಯವಾಗಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಪ್ರವೇಶದ ಹಿನ್ನೆಲೆಯಲ್ಲಿ ತಮಿಳುನಾಡು ಕರಾವಳಿ ಭಾಗಗಳಿಂದ ಸುಮಾರು 76 ಸಾವಿರಕ್ಕೂ ಹೆಚ್ಚು ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ನಾಗಪಟ್ಟಿನಂ, ಪುದುಕೊಟ್ಟೈ, ರಾಮನಾಥಪುರಂ, ತಿರುವಾವೂರು ಸೇರಿದಂತೆ 6 ಜಿಲ್ಲೆಗಳಲ್ಲಿ 300 ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ. ತಗ್ಗು ಪ್ರದೇಶಗಳಿಂದ ಸ್ಥಳಾಂತರಗೊಳಿಸಲಾಗಿರುವ ಜನರಿಗೆ ಇಲ್ಲಿ ಆಶ್ರಯ ಕಲ್ಪಿಸಲಾಗಿದೆ. ಚಂಡಮಾರುತದಿಂದ ಆಗಿರುವ ಅನಾಹುತದ ಕೆಲವು ಚಿತ್ರಗಳು ಇಲ್ಲಿವೆ ನೊಡಿ...

  • News18
  • |
First published: