PHOTOS: ದೆಹಲಿಯಲ್ಲಿ ಅನ್ನದಾತರ ಪ್ರತಿಭಟನೆ

ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಬೇರೆ ಬೇರೆ ರಾಜ್ಯಗಳಿಂದ ದೆಹಲಿಗೆ ಆಗಮಿಸಿರುವ ರೈತರು ಇಂದು ಮಧ್ಯಾಹ್ನ ಸಂಸತ್​ಗೆ​ ಮುತ್ತಿಗೆ ಹಾಕಲು ರೈತರು ಸಿದ್ಧತೆ ನಡೆಸಿದ್ದಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಾಹಾರಾಷ್ಟ್ರ, ಗುಜರಾತ್​, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ರೈತರು ಗುರುವಾರ ದೆಹಲಿಯ ರಾಮ್​ ಲೀಲಾ ಮೈದಾನದಲ್ಲಿ ಸೇರಿದ್ದರು. ರೈತರು ತಮ್ಮ ಬೆಳೆಗೆ ಕನಿಷ್ಠ ಬೆಂಬಲ ಬೆಲೆ, ಸ್ವಾಮಿನಾಥನ್​ ವರದಿ ಜಾರಿ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪ್ರತಿಭಟನೆ ನಡೆಸಿದ್ದಾರೆ.

  • News18
  • |
First published: