ಈ ಬಗ್ಗೆ ಮಾತನಾಡಿರುವ ಮುಂಬೈನ ಡೋಂಗ್ರಿ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂದೀಪ್ ಬಾಗ್ದಿಕರ್, 'ನಾವು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಪೋಸ್ಟ್ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಇದೊಂದು ಪ್ರೈವೇಟ್ ಪಾರ್ಟಿಯಲ್ಲಿ ತೆಗೆದ ಚಿತ್ರ ಎಂಬುದು ತಿಳಿದು ಬಂದಿದೆ. ಇದು ಎಲ್ಲಿ ನಡೆದಿರುವುದು ಎಂಬುದನ್ನು ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.