ಮಹಾನಗರಿ ಮುಂಬೈಗೆ ಮುಂಗಾರು ಕಾಲಿಟ್ಟಿದೆ. ಇಂದು ಬೆಳಗ್ಗೆಯಿಂದ ಮುಂಬೈನಲ್ಲಿ ಮಳೆರಾಯ ತನ್ನ ಆರ್ಭಟವನ್ನು ಆರಂಭಿಸಿದ್ಧಾನೆ. ರಸ್ತೆಗಳೆಲ್ಲವೂ ನದಿಗಳಂತಾಗಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ರಸ್ತೆಗಳಲ್ಲಿ ಸೊಂಟದವರೆಗೂ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ಧಾರೆ. ಧಾರಾಕಾರ ಮಳೆಯಿಂದಾಗಿ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.