ಚೆನ್ನೈನಲ್ಲಿ ಅತಿ ಹೆಚ್ಚು ಅಂದರೆ 134.29 ಮಿಮೀ ಮಳೆಯಾಗಿದೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನಗರದಲ್ಲಿ 160 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಕಾಂಚೀಪುರಂ ಮತ್ತು ತಿರುವಳ್ಳೂರಿನಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊಯಮತ್ತೂರು, ತಿರುನೆಲ್ವೇಲಿ, ತಿರುವರೂರ್, ವಿಲ್ಲುಪುರಂ, ಈರೋಡ್, ಕರೂರ್, ಕಡಲೂರು, ಪುದುಕೊಟ್ಟೈ, ಪೆರಂಬಲೂರು ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.60ಕ್ಕಿಂತ ಹೆಚ್ಚು ಮಳೆಯಾಗಿದ್ದು, ಜಿಲ್ಲೆಗಳಲ್ಲಿ 5,106 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಭಾರೀ ಮಳೆಯಿಂದಾಗಿ ರಸ್ತೆ ಮತ್ತು ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಕೆಲವು ವಿಮಾನಗಳು ವಿಳಂಬವಾಗಿದ್ದರೂ, ವಿಮಾನ ಸೇವೆಗಳಲ್ಲಿ ಯಾವುದೇ ದೊಡ್ಡ ವ್ಯತ್ಯಯ ಉಂಟಾಗಿಲ್ಲ.