ಕಲ್ಕಿ ಭಗವಾನ್ ಆಶ್ರಮದ ಮೇಲೆ ಐಟಿ ದಾಳಿ ವೇಳೆ 'ಸೆರೆ ಸಿಕ್ಕ' ಸಂಪತ್ತಿನ ಚಿತ್ರಗಳು
ಸ್ವಯಂಘೋಷಿತ ದೇವಮಾನವ ಕಲ್ಕಿ ಭಗವಾನ್ ಆಶ್ರಮದ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ವೇಳೆ 93 ಕೋಟಿ ನಗದು ಮತ್ತು 409 ಕೋಟಿ ಮೌಲ್ಯದ ಸಂಪತ್ತು ಪತ್ತೆಯಾಗಿದೆ. ಇದುವರೆಗೆ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದಲ್ಲಿರುವ ಕಲ್ಕಿಯ 40ಕ್ಕೂ ಹೆಚ್ಚು ಆಸ್ತಿಗಳ ಮೇಲೆ ದಾಳಿ ನಡೆದಿದೆ. ಅಪಾರ ಪ್ರಮಾಣದ ನೋಟಿನ ಕಂತೆಗಳು ಸೇರಿ ಬರೋಬ್ಬರಿ 112 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ಆಂಧ್ರದ ವರದಯ್ಯಪಾಳ್ಯಂನ ಆಶ್ರಮದಿಂದ ಕದ್ದು ಮುಚ್ಚಿ ಸಾಗಿಸುತ್ತಿದ್ದ 45 ಕೋಟಿ ರೂ. ನಗದನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.