ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗಗನಕ್ಕೇರುತ್ತಿದೆ. ಐಸಿಯು, ಬೆಡ್ಗಳಿಲ್ಲದೆ ಅನೇಕ ಸೋಂಕಿತರು ಸಾವನ್ನಪ್ಪಿರುವ ಘಟನೆಯೂ ನಡೆದಿದೆ. ಹೀಗಾಗಿ, ಅಗತ್ಯವಿರುವ ಕೊರೋನಾ ಸೋಂಕಿತರಿಗೆ ಸೂಕ್ತ ಸಮಯದಲ್ಲಿ ಆಕ್ಸಿಜನ್ ವ್ಯವಸ್ಥೆ ಒದಗಿಸುವ ಸಲುವಾಗಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ.