ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ; ಶಿಲ್ಲಾಂಗ್ನಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿ
1/ 8
ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತಾರಕಕ್ಕೇರಿದೆ. ಮೇಘಾಲಯ ರಾಜ್ಯದ ಶಿಲ್ಲಾಂಗ್ನಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಯಾಗಿದೆ.
2/ 8
ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಅನುಮೋದನೆ ದೊರೆತಿದ್ದನ್ನು ಖಂಡಿಸಿ ಮೇಘಾಲಯದಲ್ಲಿ ಕರ್ಫ್ಯೂ ಜಾರಿಯಾಗಿದೆ.
3/ 8
ಮೇಘಾಲಯ ರಾಜ್ಯಾದ್ಯಂತ 48 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಯನ್ನು ಬಂದ್ ಮಾಡಲಾಗಿದೆ.
4/ 8
ಈ ಕರ್ಫ್ಯೂ ಗುರುವಾರ ರಾತ್ರಿ 10 ಗಂಟೆಯಿಂದ ಜಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
5/ 8
ಕರ್ಫ್ಯೂ ಜಾರಿ ಹಿನ್ನೆಲೆ, ಮೇಘಾಲಯ ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ರಸ್ತೆಗಳು ಬಿಕೋ ಎನ್ನುತ್ತಿವೆ.
6/ 8
ಭಾರೀ ವಿವಾದ ಸೃಷ್ಟಿಸಿರುವ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಎಂಟು ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಅನುಮೋದನೆ ಪಡೆದುಕೊಂಡಿತ್ತು.
7/ 8
ವಿರೋಧ ಪಕ್ಷಗಳ ವಿರೋಧದ ನಡುವೆಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ ರಾಜ್ಯಸಭೆ, ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸಿಕೊಟ್ಟಿತ್ತು.
8/ 8
ಮಸೂದೆಯ ಪರವಾಗಿ 125 ಸದಸ್ಯರು ಮತ ಹಾಕಿದರೆ, ಮಸೂದೆ ವಿರುದ್ಧವಾಗಿ 105 ಮತಗಳು ಚಲಾವಣೆಯಾಗಿದ್ದವು.
First published: