Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

ಕೋವಿಡ್​ ಮಹಾಮಾರಿ ಸದ್ದಿಲ್ಲದೆ ಮಹಾಮಾರಿ ಹೆಚ್ಚಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1000ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಪ್ರಸ್ತುತ ಕೋವಿಡ್​ 19 ಸಕ್ರಿಯ ಪ್ರಕರಣಗಳ ಸಂಖ್ಯೆ 7026ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

First published:

 • 17

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ಕೋವಿಡ್​ ಮಹಾಮಾರಿ ಸದ್ದಿಲ್ಲದೆ  ಹೆಚ್ಚಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1000ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ದೇಶದಲ್ಲಿ ಪ್ರಸ್ತುತ ಕೋವಿಡ್​ 19 ಸಕ್ರಿಯ ಪ್ರಕರಣಗಳ ಸಂಖ್ಯೆ 7026ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ಜೊತೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ಛತ್ತೀಸ್‌ಗಢ, ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,30,813 ಕ್ಕೆ ಏರಿಕೆಯಾಗಿದೆ.

  MORE
  GALLERIES

 • 47

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ಪ್ರಸ್ತುತ ದೇಶದಲ್ಲಿ ಕೋವಿಡ್​ 19 ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,60,279 ಕ್ಕೆ ಏರಿಯಾಗಿದೆ. ಸೋಂಕು ಪತ್ತೆಹಚ್ಚಲು ಇದುವರೆಗೆ ಒಟ್ಟು 92.05 ಕೋಟಿ ಪರೀಕ್ಷೆಗಳನ್ನ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 1,03,831 ಮಂದಿಯನ್ನು ಕೋವಿಡ್​ ಪರೀಕ್ಷಿಗೆ ಒಳಪಡಿಸಲಾಗಿದೆ.

  MORE
  GALLERIES

 • 57

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,65,21,180 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ಕೇರಳದಲ್ಲಿ ಕೋವಿಡ್​ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಪ್ರತಿದಿನ 200ರ ಸಮೀಪ ಸೋಂಕು ಪ್ರಕರಣ ದಾಖಲಾಗುತ್ತಿವೆ. ಮಂಗಳವಾರ 172 ಪ್ರಕರಣಗಳು ವರದಿಯಾದ ಹಿನ್ನೆಲೆ ಕೇರಳ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ರಾಜ್ಯಕ್ಕೆ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಕರ್ನಾಟಕಕ್ಕೂ ಭೀತಿ ಎದುರಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Covid 19 Update: ದೇಶದಲ್ಲಿ ಒಂದೇ ದಿನ 1000 ದಾಟಿದ ಕೋವಿಡ್ ಪ್ರಕರಣ, 5 ಸಾವು; ಪಿಎಂ ಮೋದಿಯಿಂದ ಉನ್ನತ ಮಟ್ಟದ ಸಭೆ

  ಇನ್ನೂ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಮತ್ತು ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ   ಸೂಚನೆ ನೀಡಲಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES