Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

ನವದೆಹಲಿ: ಇತ್ತಿಚಿನ ದಿನಗಳಲ್ಲಿ ವಿಮಾನ ಪ್ರಯಾಣದ ವೇಳೆ ಪ್ಯಾಸೆಂಜರ್‌ಗಳು ದುರ್ವರ್ತನೆ ತೋರುವ ಪ್ರಕರಣಗಳು ಪದೇ ಪದೇ ಪುನರಾವರ್ತನೆಯಾಗುತ್ತಿದ್ದು, ವಿಮಾನ ಸಿಬ್ಬಂದಿಗೆ ಹಲ್ಲೆ, ಮೂತ್ರ ವಿಸರ್ಜನೆ, ಎಮರ್ಜೆನ್ಸಿ ಡೋರ್ ಓಪನ್ ಮಾಡೋದು, ಲೈಂಗಿಕ ಕಿರುಕುಳ ಹೀಗೆ ಒಂದಲ್ಲೊಂದು ದುರ್ವರ್ತನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ.

First published:

  • 17

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ನ್ಯೂಯಾರ್ಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಕೇಳಿ ಬಂದಿದೆ.

    MORE
    GALLERIES

  • 27

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ಅಮೆರಿಕನ್‌ ಏರ್‌ಲೈನ್ಸ್‌ನ AA-292 ವಿಮಾನವು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿತ್ತು. ಈ ವೇಳೆ ಭಾರತದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    MORE
    GALLERIES

  • 37

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ಆರೋಪಿಯು ವಿಪರೀತ ಕುಡಿದು ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ವಿಮಾನದ ಸಿಬ್ಬಂದಿ ತಿಳಿಸಿದ್ದು, ಇದೇ ವಿಚಾರವಾಗಿ ಸಹ ಪ್ರಯಾಣಿಕನ ಜೊತೆ ಜಗಳವೂ ನಡೆದಿದೆ ಎಂದು ವರದಿಗಳು ತಿಳಿಸಿವೆ.

    MORE
    GALLERIES

  • 47

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ಈ ಸಂಬಂಧ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನ ಲ್ಯಾಂಡಿಂಗ್‌ ಆಗುವ ಮೊದಲೇ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಷಯ ವರದಿ ಮಾಡಿತ್ತು.

    MORE
    GALLERIES

  • 57

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿಮಾನದ ಸಿಬ್ಬಂದಿ ನಿನ್ನೆ ರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ಬೆನ್ನಲ್ಲೇ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಬಂಧನ ಮಾಡಿದ್ದಾರೆ.

    MORE
    GALLERIES

  • 67

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ವಿಮಾನಯಾನ ಸಂಸ್ಥೆ ಸಹಪ್ರಯಾಣಿಕನ ಹೇಳಿಕೆಯನ್ನ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ನಾಗರಿಕ ವಿಮಾನಯಾನ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

    MORE
    GALLERIES

  • 77

    Viral News: ಕುಡಿತದ ನಶೆಯಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ; ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಅರೆಸ್ಟ್‌

    ಕಳೆದ ವರ್ಷ ನವೆಂಬರ್‌ನಲ್ಲಿ ಏರ್‌ ಇಂಡಿಯಾದಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಮತ್ತೊಂದು ಘಟನೆಯಲ್ಲಿ ಡಿಸೆಂಬರ್‌ 6 ರಂದು ಪ್ಯಾರಿಸ್-ನವದೆಹಲಿ ಏರ್‌ ಇಂಡಿಯಾ ವಿಮಾನದಲ್ಲೂ ಇದೇ ಘಟನೆ ನಡೆದಿತ್ತು.

    MORE
    GALLERIES