ಪ್ರಸ್ತುತ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತದಲ್ಲಿ 15 ಮಾರ್ಗಗಳಲ್ಲಿ ಸಂಚರಿಸುತ್ತಿದೆ. ದೇಶದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ನವದೆಹಲಿ-ವಾರಣಾಸಿ ಮಾರ್ಗದಲ್ಲಿ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ದೇಶದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನವದೆಹಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಆರಂಭವಾಯಿತು, ಇದೀಗ ಕಳೆದ ಒಂದು ವರ್ಷದಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದೆ.
ಗಾಂಧಿನಗರ ರಾಜಧಾನಿ-ಮುಂಬೈ ಸೆಂಟ್ರಲ್ ಮಾರ್ಗದಲ್ಲಿ ಚಲಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಈ ರೈಲಿನ ನವೀಕರಿಸಿದ ಆವೃತ್ತಿಯಾಗಿದೆ. ಇದರಲ್ಲಿ ಪ್ರಯಾಣಿಸುವ ಪ್ರಯಾಣಿಕರು ಹಿಂದಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗಿಂತ ಹೆಚ್ಚು ಮತ್ತು ಉತ್ತಮ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಅಪ್ಡೇಟ್ ವರ್ಸನ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ನಿರ್ಮಾಣಕ್ಕೆ ಸುಮಾರು 115 ಕೋಟಿ ರೂಪಾಯಿ ವೆಚ್ಚವಾಗಲಿದೆ.