Indira Gandhi ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹುಟ್ಟುಹಬ್ಬ : ಕೆಲವು ಅಪರೂಪದ ಚಿತ್ರಗಳು

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ ಅಂಗವಾಗಿ ದೆಹಲಿಯ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಗೌರವ ನಮನ ಸಲ್ಲಿಸಿದರು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಇನ್ನೂ ಹಲವು ನಾಯಕರು ಇಂದಿರಾ ಗಾಂಧಿಯವರ ಸಮಾಧಿ ಬಳಿ ತೆರಳಿ ಗೌರವ ನಮನ ಸಲ್ಲಿಸಿದರು. 1917ರ ನವೆಂಬರ್ 19ರಂದು ಜನಿಸಿದ್ದ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರು ಜವಹರಲಾಲ್ ನೆಹರೂ ಮತ್ತು ಕಮಲಾ ನೆಹರೂ ಅವರ ಏಕೈಕ ಪುತ್ರಿ. ಅವರು 1966ರಿಂದ 1977ರವರೆಗೆ ಮತ್ತು 1980ರಿಂದ ಅವರ ಹತ್ಯೆಯಾಗುವ 1984ರವರೆಗೆ ಪ್ರಧಾನ ಮಂತ್ರಿಯಾಗಿದ್ದರು. ಇಂದಿರಾ ಗಾಂಧಿಯವರ ಕೆಲವು ಅಪರೂಪದ ಚಿತ್ರಗಳು ನಿಮ್ಮ ನ್ಯೂಸ್ 18 ಕನ್ನಡದಲ್ಲಿ

First published: