PHOTOS: ಪ್ರಧಾನಿ ಮೋದಿ ಭೇಟಿ ಮಾಡಿದ ಆಂಧ್ರ ಚುನಾಯಿತ ಸಿಎಂ ಜಗನ್ ಮೋಹನ್ ರೆಡ್ಡಿ
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ, ಆಂಧ್ರ ಪ್ರದೇಶದ ಚುನಾಯಿತ ಸಿಎಂ ಜಗನ್ ಮೋಹನ್ ರೆಡ್ಡಿ ಇಂದು ಬೆಳಗ್ಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಆಂಧ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಜಗನ್ ಮೋಹನ್ ರೆಡ್ಡಿ 175 ಸ್ಥಾನಗಳಲ್ಲಿ 151 ಸ್ಥಾನ ಗೆದ್ದು ನೂತನ ಸಿಎಂ ಆಗಿ ಚುನಾಯಿತರಾಗಿದ್ದಾರೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಕೇವಲ 23 ಸ್ಥಾನಗಳನ್ನು ಪಡೆದು ಸೋಲು ಅನುಭವಿಸಿದೆ. ಲೋಕಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷ 25 ಲೋಕಸಭಾ ಕ್ಷೇತ್ರಗಳಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಟಿಡಿಪಿ ಕೇವಲ ಮೂರು ಸ್ಥಾನಗಳಲ್ಲಿ ಗೆದ್ದಿದೆ.