Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

ಟೋಕಿಯೋ: ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡುತ್ತಿದ್ದ ವೇಳೆ ಸಮೀಪದಲ್ಲೇ ಬಾಂಬ್ ಸ್ಫೋಟಗೊಂಡಿರುವ ಆಘಾತಕಾರಿ ಘಟನೆ ಜಪಾನ್‌ನ ವಕಯಾಮಾದಲ್ಲಿ ನಡೆದಿದೆ.

First published:

  • 17

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಪಶ್ಚಿಮ ಜಪಾನ್‌ನ ವಕಯಾಮಾದಲ್ಲಿ ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡುತ್ತಿದ್ದರು. ಈ ವೇಳೆ ಪ್ರಧಾನಿಯನ್ನು ಗುರಿಯಾಗಿಸಿ ಸ್ಫೋಟಕ ವಸ್ತುವನ್ನು ಎಸೆಯಲಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    MORE
    GALLERIES

  • 27

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಬಾಂಬ್ ದಾಳಿ ನಡೆದ ತಕ್ಷಣ ಪ್ರಧಾನಿ ಪ್ಯುಮಿಯೊ ಕಿಶಿಡಾ ಅವರನ್ನು ಘಟನಾ ಸ್ಥಳದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಲು ಭದ್ರತಾ ಸಿಬ್ಬಂದಿ ನಿರಾಕರಿಸಿದ್ದಾರೆ.

    MORE
    GALLERIES

  • 37

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಅವರೆಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡಿದೆ. ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

    MORE
    GALLERIES

  • 47

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಡೆದಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭದ್ರತಾ ಪಡೆ ಎಲ್ಲಾ ಆಯಾಮದಿಂದಲೂ ತನಿಖೆ ಶುರು ಮಾಡಿದೆ.

    MORE
    GALLERIES

  • 57

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಕಳೆದ ವರ್ಷ ಜುಲೈ ತಿಂಗಳಲ್ಲಿ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ಅವರ ಮೇಲೆಯೂ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದ.

    MORE
    GALLERIES

  • 67

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತ್ಯಕ್ಷದರ್ಶಿ ಮಹಿಳೆ, ‘ನಾನು ಘಟನೆಯಿಂದ ದಿಗ್ಭ್ರಮೆಗೊಂಡಿದ್ದೇನೆ. ನನ್ನ ಹೃದಯ ಈಗಲೂ ಜೋರಾಗಿ ಬಡಿದುಕೊಳ್ಳುತ್ತಿದೆ ಎಂದಿದ್ದಾರೆ. ಸ್ಫೋಟಕ್ಕೂ ಮೊದಲೇ ಜನರು ಓಡಲು ಆರಂಭಿಸಿದ್ದರು ಎಂದು ಮತ್ತೊಬ್ಬ ವ್ಯಕ್ತಿ ಹೇಳಿದ್ದಾನೆ.

    MORE
    GALLERIES

  • 77

    Fumio Kishida: ಜಪಾನ್ ಪ್ರಧಾನಿ ಭಾಷಣದ ವೇಳೆ ಬಾಂಬ್ ಸ್ಫೋಟ! ತಪ್ಪಿದ ಭಾರೀ ದುರಂತ

    ಜಪಾನ್‌ ಸಂಸತ್ತಿನ ಕೆಳಮನೆಯ ಕ್ಷೇತ್ರವೊಂದರ ಉಪ ಚುನಾವಣೆ ಹಿನ್ನೆಲೆ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಕಿಶಿಡಾ ಸ್ವಲ್ಪ ಸಮಯದಲ್ಲೇ ಭಾಷಣ ಆರಂಭಿಸಬೇಕಿತ್ತು. ಅಷ್ಟರಲ್ಲಿ ಸ್ಫೋಟ ಸಂಭವಿಸಿದೆ.

    MORE
    GALLERIES