ಒಡಿಶಾ, ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ Jawad ಚಂಡಮಾರುತ; ಹೈ ಆಲರ್ಟ್ ಘೋಷಣೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಜವಾದ್ ಚಂಡಮಾರುತ (Jawad Cyclone) ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಭಾನುವಾರ ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಎಚ್ಚರಿಕೆ ನೀಡಿದೆ. ಜವಾದ್ ಚಂಡಮಾರತ ಅಪ್ಪಳಿಸುವ ಹಿನ್ನಲೆ ಆಂಧ್ರ ಪ್ರದೇಶ (Andra Pradesh) ಮತ್ತು ಒಡಿಶಾ (Odisha) ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಈ ಜವಾದ್ ಚಂಡಮಾರುತ ಒಡಿಶಾದ ಪುರಿ ಕರಾವಳಿ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜವಾದ್ ಚಂಡಮಾರುತದ ರಚನೆಯಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳು, ಕೇಂದ್ರ ಸಚಿವಾಲಯಗಳು ಮತ್ತು ಸಂಬಂಧಿತ ಏಜೆನ್ಸಿಗಳ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದರು
2/ 6
ಕರಾವಳಿ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದ್ದು, ವಿದ್ಯುತ್, ದೂರಸಂಪರ್ಕ, ಆರೋಗ್ಯ ಮತ್ತು ಕುಡಿಯುವ ನೀರಿನಂತಹ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆ ಸಂಬಂಧ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಸಚಿವಾಲಯ ಸೂಚನೆ ನೀಡಿದೆ.
3/ 6
ಒಡಿಶಾ ದಕ್ಷಿಣ ಕರಾವಳಿಯಾದ್ಯಂತ 266 ರಕ್ಷಣಾ ತಂಡಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ, ಇದರಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ರಾಜ್ಯ ಅಗ್ನಿಶಾಮಕ ಸೇವೆಗಳು ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ODRAF) ಸೇರಿವೆ.
4/ 6
ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರವು ಸನ್ನದ್ಧವಾಗಿದೆ, 14 ಕರಾವಳಿ ಜಿಲ್ಲೆಗಳನ್ನು ಅಲರ್ಟ್ ಮಾಡಲಾಗಿದೆ ಮತ್ತು ಮುಂಬರುವ ಚಂಡಮಾರುತದ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಲಾಗಿದೆ ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ (ಎಸ್ಆರ್ಸಿ) ಪ್ರದೀಪ್ ಕುಮಾರ್ ಜೆನಾ ತಿಳಿಸಿದ್ದಾರೆ.
5/ 6
ಆಂಧ್ರಪ್ರದೇಶದ ಶ್ರೀಕಾಕುಳಂ, ವಿಜಯನಗರ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಿಗೆ ಚಂಡ ಮಾರುತ ಸಾಕಷ್ಟ ಹಾನಿ ಮಾಡುವ ಸಾಧ್ಯತೆ ಇರುವ ಹಿನ್ನಲೆ ಈ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮಾತನಾಡಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ
6/ 6
ಜವಾದ್ ಚಂಡಮಾರುತ ಪರಿಣಾ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಚಂಡ ಮಾರುತ ಹಿನ್ನಲೆ ಮೂರು ರಾಜ್ಯಗಳ ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗುದೆ