Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

ಜಮ್ಮು ಕಾಶ್ಮೀರ: ನಾವು ರಾಮನ ಭಕ್ತರು ಎಂದು ನಿಮ್ಮ ಬಳಿಗೆ ಬರುವವರು ಮೂರ್ಖರು. ಅವರು ರಾಮನ ಹೆಸರಿನಲ್ಲಿ ಲಾಭ ಪಡೆದುಕೊಳ್ಳಲು ಬಯಸುತ್ತಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

First published:

 • 17

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ಪಕ್ಷದ ವತಿಯಿಂದ ಉದಯಪುರದಲ್ಲಿ ಗುರುವಾರ ನಡೆದ ರಾಜಕೀಯ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮನ ಭಕ್ತರು ಎಂದು ನಿಮ್ಮ ಬಳಿಗೆ ಬರುವವರಿಗೆ ರಾಮನ ಮೇಲೆ ಪ್ರೀತಿ ಇರಲ್ಲ, ಆದರೆ ಅಧಿಕಾರದ ಮೇಲೆ ಇರುತ್ತದೆ ಎಂದರು.

  MORE
  GALLERIES

 • 27

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ಬಿಜೆಪಿ ವಿರುದ್ಧ ತಮ್ಮ ಭಾಷಣದಲ್ಲಿ ವಾಗ್ದಾಳಿ ನಡೆಸಿರುವ ಫಾರೂಕ್ ಅಬ್ದುಲ್ಲಾ, ಶ್ರೀರಾಮ ಹಿಂದೂಗಳಿಗೆ ಮಾತ್ರ ದೇವರಲ್ಲ. ಧರ್ಮದ ಹೊರತಾಗಿ ಶ್ರೀರಾಮನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರಿಗೂ ರಾಮ ದೇವರು ಎಂದು ಅಭಿಪ್ರಾಯ ಪಟ್ಟಿದ್ದಾರೆ.

  MORE
  GALLERIES

 • 37

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಅವರು, ಪಕ್ಷ ಅಧಿಕಾರದಲ್ಲಿ ಉಳಿಯಲು ರಾಮನ ಹೆಸರನ್ನು ಮಾತ್ರ ಬಳಸುತ್ತಿದೆ. ಆದರೆ ರಾಮ ಕೇವಲ ಹಿಂದೂಗಳ ದೇವರಲ್ಲ ಎಂದು ಕಿಡಿಕಾರಿದ್ದಾರೆ.

  MORE
  GALLERIES

 • 47

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರು ಎಂಬ ಕಲ್ಪನೆಯನ್ನು ನಿಮ್ಮ ಮನಸ್ಸಿನಿಂದ ದಯವಿಟ್ಟು ಕಿತ್ತು ಹಾಕಿ ಎಂದಿರುವ ಅವರು, ಭಗವಂತ ರಾಮ ಪ್ರತಿಯೊಬ್ಬನಿಗೂ ದೇವರು. ಅದು ಮುಸ್ಲಿಂ ಆಗಿರಲಿ ಅಥವಾ ಕಿಶ್ಚಿಯನ್ ಆಗಿರಲಿ, ಅಮೆರಿಕನ್ ಅಥವಾ ರಷ್ಯನ್ ಆಗಿರಲಿ ಎಂದು ಹೇಳಿದ್ದಾರೆ.

  MORE
  GALLERIES

 • 57

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ಬಿಜೆಪಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಫಾರೂಕ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಘೋಷಣೆಯಾದಾಗ ಅವರು ಸಾಮಾನ್ಯ ಜನರ ಗಮನ ಬೇರೆಡೆಗೆ ತಿರುಗಿಸಲು ರಾಮ ಮಂದಿರವನ್ನು ಉದ್ಘಾಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

  MORE
  GALLERIES

 • 67

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ಮುಂದುವರಿದು ಮಾತನಾಡಿರುವ ಅವರು, ಬಿಜೆಪಿ ನಾಯಕರಿಗೆ ‘ನೀವು ದಯವಿಟ್ಟು ಜನರ ನಡುವೆ ಹೋಗಿ ದ್ವೇಷದ ಪ್ರಚಾರವನ್ನು ಮಾಡುವುದನ್ನು ನಿಲ್ಲಿಸಬೇಕು’ ಎಂದು ಮನವಿ ಮಾಡಿದ್ದಾರೆ.

  MORE
  GALLERIES

 • 77

  Farooq Abdullah: ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರು: ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

  ವಿಶೇಷ ಅಂದ್ರೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರು, ಕಳೆದ ವರ್ಷ ಕೂಡ ರಾಮ ಪ್ರತಿಯೊಬ್ಬರಿಗೂ ದೇವರು ಎಂದು ಹೇಳಿಕೆಯನ್ನು ನೀಡಿದ್ದರು.

  MORE
  GALLERIES