ಮೋದಿ ಅವರು ಮಂಗಳವಾರ ಬೆಳಗ್ಗೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಬಳಿಕ ಸೆಂಟ್ರಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಇದೇ ವೇಳೆ 4 ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ, ಟೆಕ್ನೋ ಸಿಟಿಗೆ ಶಂಕುಸ್ಥಾಪನೆ ಮತ್ತು ಕೊಚ್ಚಿ ವಾಟರ್ ಮೆಟ್ರೋಗೂ ಚಾಲನೆ ನೀಡಲಿದ್ದಾರೆ.