Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

ಭೋಪಾಲ್: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆತರಲಾಗಿದ್ದ ಅಪರೂಪದ 12 ಚೀತಾಗಳನ್ನು ಬೇರೆ ಸ್ಥಳಕ್ಕೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮಧ್ಯಪ್ರದೇಶ ರಾಜ್ಯ ಸರ್ಕಾರ ಪತ್ರ ಬರೆದಿದೆ.

First published:

 • 18

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಭಾರತಕ್ಕೆ ಕರೆತಂದ ಬೆನ್ನಲ್ಲೇ ಒಂದು ತಿಂಗಳ ಅವಧಿಯಲ್ಲಿ ಎರಡು ಚೀತಾಗಳು ಸಾವನ್ನಪ್ಪಿದ ಬೆನ್ನಲ್ಲೇ ಅವುಗಳನ್ನು ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಿಂದ ಬೇರೆಡೆಗ ವರ್ಗಾಯಿಸುವಂತೆ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರಕ್ಕೆ ವಿನಂತಿ ಮಾಡಿದೆ.

  MORE
  GALLERIES

 • 28

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಕುನೊ ಉದ್ಯಾನವನದ ವಾತಾವರಣಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು ಎಂದು ಪತ್ರದಲ್ಲಿ ಹೇಳಲಾಗಿದೆ.

  MORE
  GALLERIES

 • 38

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ ಎಂದು ಇಲ್ಲಿನ ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

  MORE
  GALLERIES

 • 48

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಕೆಲ ಚೀತಾಗಳು ಕುನೋ ಅರಣ್ಯದಲ್ಲಿ ಜಾಗ ಸಾಲದೆ ಪದೇಪದೇ ಬೇರೆ ಅರಣ್ಯಕ್ಕೆ ಹೋಗುತ್ತಿರುವುದು ಇತ್ತೀಚೆಗೆ ವರದಿಯಾಗಿತ್ತು. ಒಂದು ಚೀತಾಕ್ಕೆ ಸಂಚರಿಸಲು ಸರಾಸರಿ 100 ಚ.ಕಿ.ಮೀ. ಅರಣ್ಯ ಬೇಕಾಗುತ್ತದೆ.

  MORE
  GALLERIES

 • 58

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಕುನೊ ರಾಷ್ಟ್ರೀಯ ಉದ್ಯಾನವನ 748 ಚದರ ಕಿ.ಮೀ. ವಿಸ್ತೀರ್ಣ ಹೊಂದಿದ್ದು,ಈ ಪಾರ್ಕ್‌ನಲ್ಲಿ ಆಫ್ರಿಕಾದ ಚಿರತೆಗಳನ್ನು ಬಿಡುವುದೆಂದು ಪ್ಲಾನ್ ಮಾಡಿದ್ದಾಗಲೇ ಅವುಗಳಿಗೆ ಇಷ್ಟು ಜಾಗ ಸಾಲದು, ಮತ್ತು ಭಾರತದ ನೆಲಕ್ಕೆ ಚೀತಾಗಳು ಹೊಂದಿಕೊಳ್ಳದು ಎಂದು ವನ್ಯಜೀವಿ ತಜ್ಞರು ಎಚ್ಚರಿಸಿದ್ದರು. 

  MORE
  GALLERIES

 • 68

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಒಂದು ಚೀತಾವನ್ನು ನೋಡಿಕೊಳ್ಳಲು 9 ಜನರು ಬೇಕು. ಅಷ್ಟು ಸಿಬ್ಬಂದಿ ನಮ್ಮಲ್ಲಿಲ್ಲ. ಹೀಗಾಗಿ ಚೀತಾಗಳನ್ನು ಸ್ಥಳಾಂತರಿಸಬೇಕು ಎಂದು ಅವುಗಳ ಉಸ್ತುವಾರಿ ಹೊತ್ತಿರುವ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

  MORE
  GALLERIES

 • 78

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಕಳೆದ ವರ್ಷ ನಮೀಬಿಯಾದಿಂದ 8 ಮತ್ತು ದ.ಆಫ್ರಿಕಾದಿಂದ 12 ಚೀತಾಗಳನ್ನು ‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

  MORE
  GALLERIES

 • 88

  Cheetah: 1 ತಿಂಗಳಲ್ಲಿ 2 ಚೀತಾ ಸಾವು; ಕುನೋ ಉದ್ಯಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರಕ್ಕೆ ಮಧ್ಯಪ್ರದೇಶ ಪತ್ರ

  ಮೊದಲ ಕಂತಿನಲ್ಲಿ ನಮೀಬಿಯಾದಿಂದ ತಂದಿದ್ದ 8 ಚೀತಾಗಳನ್ನು ಈಗಾಗಲೇ ಮುಕ್ತ ಕಾಡಿಗೆ ಬಿಡಲಾಗಿದೆ. ಎರಡನೇ ಕಂತಿನಲ್ಲಿ ದಕ್ಷಿಣ ಆಫ್ರಿಕಾದಿಂದ ತಂದ 12 ಚೀತಾಗಳನ್ನು ಇನ್ನೂ ಪೂರ್ಣ ಪ್ರಮಾಣದ ಕಾಡಿಗೆ ಬಿಟ್ಟಿಲ್ಲ.

  MORE
  GALLERIES