ಶಿವಸೇನಾ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಮತ್ತು ಸ್ವತಂತ್ರ ಶಾಸಕರ ಬಂಡಾಯವು ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಭೂಕಂಪವನ್ನು ಉಂಟುಮಾಡಿದೆ. ಏಕನಾಥ್ ಶಿಂಧೆ ನೇತೃತ್ವದಲ್ಲಿ ಸುಮಾರು 45-50 ಬಂಡಾಯ ಶಾಸಕರು ಕಳೆದ ಕೆಲವು ದಿನಗಳಿಂದ ಗುವಾಹಟಿಯ ಪಂಚತಾರಾ ಹೋಟೆಲ್ ಬ್ಲೂ ರಾಡಿಸನ್ನಲ್ಲಿ ಮೊಕ್ಕಾಂ ಹೂಡಿದ್ದಾರೆ. ಹೋಟೆಲ್ ಬ್ಲೂ ರಾಡಿಸನ್ ಅಸ್ಸಾಂನಲ್ಲಿ ಮಾತ್ರವಲ್ಲದೆ ದೇಶದ ಅತ್ಯಂತ ದುಬಾರಿ ಹೋಟೆಲ್ಗಳಲ್ಲಿ ಒಂದಾಗಿದೆ.