ಅಲ್ಲಿನ ವರ್ಣಭೇದ ನೀತಿಯನ್ನು ಅಳಿಸಲು ಚಳುವಳಿಯನ್ನು ಆರಂಭಿಸಿದರು. ಅಲ್ಲಿನ ಪೀಟರ್ ಮ್ಯಾರಿಟ್ಸ್ ಬರ್ಗ್ ಎಂಬ ನಗರದಲ್ಲಿ ರೈಲಿನಲ್ಲಿ ಮೊದಲ ದರ್ಜೆ ಟಿಕೆಟ್ ತೆಗೆದು ಕೊಂಡಿದ್ದರೂ ಅಲ್ಲಿ ಕೂರಲು ಬಿಡದೆ ರೈಲಿನಿಂದ ಹೊರ ಹಾಕಿದಾಗ, ಅವರ ವರ್ಣಭೇದ ನೀತಿಯ ವಿರುದ್ಧ ಹೋರಾಡುವ ನಿಶ್ವಯ ಸ್ಥಿರವಾಯಿತು. ನವೆಂಬರ್ 6, 1913 ರಲ್ಲಿ ಭಾರತೀಯ ಗಣಿಗಾರರ ಒಂದು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ ಗಾಂಧೀಜಿ ಬಂಧಿತರಾದರು.
ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಳಿಕೊಂಡರು.( ಚಿತ್ರದಲ್ಲಿ ಗಾಂದೀಜಿ ಜೊತೆ ರವೀಂದ್ರನಾಥ್ ಠಾಗೋರ್ )