ಉಪಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, ಈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ನ ಬಾಯ್ರನ್ ಬಿಸ್ವಾಸ್ ಅವರು ಗೆಲುವು ಪಡೆದಿದ್ದಾರೆ. ಸಿಪಿಐ(ಎಂ) ಬೆಂಬಲ ಗಳಿಸಿದ್ದ ಕಾಂಗ್ರೆಸ್ ಪಕ್ಷವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಸೋಲಿಸುವ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.