ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧನ ಮಾಡಿದ್ದಾರೆ.
2/ 7
ಉತ್ತರ ಪ್ರದೇಶದ ಸಹಾರಾನ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಕಾಮುಕನನ್ನು ಗಗಲ್ಹೆಡಿ ಪೊಲೀಸ್ ಠಾಣೆ ವ್ಯಾಪ್ತಿಯಯಲ್ಲಿ ಪೊಲೀಸರು ಬಂಧಿಸಿದ್ದಾರೆ.
3/ 7
ಅಪ್ರಾಪ್ತ ಬಾಲಕಿಯು ತನ್ನ ದೂರಿನಲ್ಲಿ ತನ್ನ ತಂದೆ ತನ್ನನ್ನು ಮತ್ತು ಸಬಾಲ್ ಜಿಲ್ಲೆಯ ತನ್ನ ಸ್ನೇಹಿತೆಯನ್ನು ಅತ್ಯಾಚಾರ ಮಾಡುತ್ತಿದ್ದ ಎಂದು ಆರೋಪಿಸಿದ್ದಾಳೆ.
4/ 7
ಸಾಮಾಜಿಕ ಒತ್ತಡದಿಂದಾಗಿ ನಾವು ತಂದೆಯ ಅಪರಾಧ ಕೃತ್ಯದ ಬಗ್ಗೆ ಮೌನವಾಗಿದ್ದೆವು. ಆದರೆ, ನಂತರ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದೆವು ಎಂದು ಅವರು ಹೇಳಿದ್ದಾರೆ.
5/ 7
ಇನ್ನು ಆರೋಪಿ ಪದೇ ಪದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಸಂತ್ರಸ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖ ಮಾಡಿದ್ದಾಳೆ.
6/ 7
ಸದ್ಯ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶನಿವಾರ ಆತನನ್ನು ಗಗಲ್ಹೆಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
7/ 7
ಇನ್ನು ಇಬ್ಬರು ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದ್ದು, ವೈದ್ಯರು ಪರೀಕ್ಷೆಯ ವರದಿಯನ್ನು ನೀಡಿದ ಬಳಿಕ ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದ್ದಾರೆ.
First published:
17
Crime News: ಅಪ್ರಾಪ್ತ ವಯಸ್ಸಿನ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ತಂದೆಯ ಬಂಧನ