ಉತ್ತರಪ್ರದೇಶ: 26 ವರ್ಷದ ಯುವಕನೊಬ್ಬ ತನ್ನ ಗೆಳತಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ನಂದಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಘುಖಾನಾ ಗ್ರಾಮದ ದೀಪಮಲಾ ಯಾದವ್ (24 ) ಎಂಬ ಯುವತಿಯ ಮನೆಗೆ ನುಗ್ಗಿದ ಆರೋಪಿ ರಾಹುಲ್ ಚೌಧರಿ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ.
2/ 7
ಯುವತಿಗೆ ಗುಂಡು ಹಾರಿಸಿದ ನಂತರ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ರಾಹುಲ್ ಚೌಧರಿ ವಿಷ ಸೇವಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ನಿಪುನ್ ಅಗರ್ವಾಲ್ ಹೇಳಿದ್ದಾರೆ.
3/ 7
ಆರೋಪಿ ರಾಹುಲ್ ಚೌಧರಿ ದೀಪಮಲಾ ಯಾದವ್ ಎಂಬಾಕೆಯ ಮನೆಗೆ ಬಂದಾಗ ಆಕೆಯ ಪೋಷಕರು ಹೊರಗಡೆ ಹೋಗಿದ್ದರು. ಇದೇ ಸಮಯವನ್ನು ಕಾದು ಕುಳಿತಿದ್ದ ಆರೋಪಿ ಮನೆಗೆ ಬಂದು ಕೃತ್ಯ ಎಸಗಿದ್ದಾನೆ.
4/ 7
ನೆರೆಹೊರೆಯವರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಆದರೆ ಅಷ್ಟರಲ್ಲಾಗಲೇ ಯುವತಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
5/ 7
ಜಿಲ್ಲಾ ಸರ್ಕಾರಿ ಆಸ್ಪತ್ರೆಯು ಚೌಧರಿ ಅನ್ನು ಈಶಾನ್ಯ ದೆಹಲಿಯ ಜಿಟಿಬಿ ಆಸ್ಪತ್ರೆಗೆ ರವಾನಿಸಿದರು. ಆದರೆ ಅಲ್ಲಿ ಆತ ಚಿಕಿತ್ಸೆ ನೀಡುವ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದರು.
6/ 7
ಬುಲಂದ್‌ಶಹರ್ ಜಿಲ್ಲೆಯ ಸೇಲಂಪುರ್ ನಿವಾಸಿಯಾದ ರಾಹುಲ್ ಎಂಬಾತ ತನ್ನ ಹಳ್ಳಿಯಲ್ಲಿ ಮೃತ ಯುವತಿಯನ್ನು ಆಗಾಗ ಭೇಟಿಯಾಗುತ್ತಿದ್ದ.
7/ 7
ಯುವತಿ ತನ್ನ ತಾಯಿಯ ಚಿಕ್ಕಪ್ಪನ ಮನೆಗೆ ಹೋಗುತ್ತಿದ್ದಾಗ ಇಬ್ಬರೂ ಪರಸ್ಪರ ಮಾತನಾಡಲು ಪ್ರಾರಂಭಿಸಿದ್ದಾರೆ. ಬಳಿಕ ರಾಹುಲ್ ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದು ಇದಕ್ಕೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.