ಈ ಬಗ್ಗೆ ಟ್ವೀಟ್ ಮಾಡಿರುವ ಮಣಿಪುರ ಸಿಎಂ ಬಿರೇನ್ ಸಿಂಗ್, ‘ಯಾವುದೇ ರೀತಿಯ ಹಿಂಸಾಚಾರದಿಂದ ದೂರವಿರುವಂತೆ ಮಣಿಪುರದ ಪ್ರತಿಯೊಬ್ಬರಿಗೂ ನಾನು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸರು ಮತ್ತು ಅರೆಸೇನಾ ಪಡೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಮಣಿಪುರದ ಚುರಾಚಂದ್‌ಪುರ ನಿವಾಸಿಗಳು ಮೊಯಿರಾಂಗ್‌ನಲ್ಲಿನ ಪರಿಹಾರ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ, ಅವರು ತಮ್ಮ ಕುಟುಂಬಗಳು ಮತ್ತು ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವ್ಯಕ್ತಿಯೊಬ್ಬರು, ‘ನಾನು ನನ್ನ ಮನೆಯ ಬಗ್ಗೆ ಚಿಂತಿತನಾಗಿದ್ದೇನೆ. ಅವರು ನಮ್ಮ ಮನೆಯನ್ನು ಸುಟ್ಟುಹಾಕುತ್ತಾರೆ ಎಂದು ನನಗೆ ಭಯವಾಗಿದೆ ಎಂದು ಹೇಳಿದರು.