Karnataka Weather Report: ಇಂದು ರಾಜ್ಯದಲ್ಲಿ ಶುಷ್ಕ ಹವಾಮಾನ ಇರಲಿದ್ದು, ಎಂದಿನಂತೆ ಚಳಿ ಇರಲಿದೆ. ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 27 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ. ಇತ್ತ ಮೈಸೂರು ಭಾಗದಲ್ಲಿ ಶುಷ್ಕ ಹಮಾಮಾನದ ಜೊತೆ ಚಳಿ ಸಹ ಇರಲಿದೆ. ಬೆಳಗ್ಗೆ ಬೀಳುವ ಮಂಜು ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕಡಲೆ, ಜೋಳ ಹಳದಿ ರೋಗಕ್ಕೆ ತುತ್ತಾಗುವ ಆತಂಕ ಎದುರಾಗಿದೆ. ಮತ್ತೊಂದೆಡೆ ಕೊರೋನಾ, ಓಮೈಕ್ರಾನ್ (Corona And Omicron) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ.
ಮುಂಬೈ(ಜ.07): ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್ಡೌನ್(Lockdown) ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್ಡೌನ್ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 20,181 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಬುಧವಾರ ಪತ್ತೆಯಾದ ಪ್ರಕರಣಗಳಿಗಿಂತ ಶೇ.33ರಷ್ಟು ಹೆಚ್ಚಾಗಿದೆ. ನಿನ್ನೆ 4 ಸಾವುಗಳು ಸಹ ದಾಖಲಾಗಿವೆ. ಮುಂಬೈನಲ್ಲಿ ಬುಧವಾರ 15,166 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು.
Petrol And Diesel Price Today: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.
Gold Rate on Jan 7, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,080 ರೂ. ಇತ್ತು. ಇಂದು 250 ರೂ. ಇಳಿಕೆಯಾಗಿದ್ದು 46,830 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,080 ರೂ. ಇತ್ತು. ಇಂದು 250 ರೂ. ಕಡಿಮೆಯಾಗಿದ್ದು, 48,830 ರೂ. ಆಗಿದೆ.
Gold Rate on Jan 7, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,080 ರೂ. ಇತ್ತು. ಇಂದು 250 ರೂ. ಇಳಿಕೆಯಾಗಿದ್ದು 46,830 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,080 ರೂ. ಇತ್ತು. ಇಂದು 250 ರೂ. ಕಡಿಮೆಯಾಗಿದ್ದು, 48,830 ರೂ. ಆಗಿದೆ.