Mumbai Fire: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ, 7 ಮಂದಿ ಸಾವು, ಹಲವರಿಗೆ ಗಾಯ
Mumbai Fire: ವಾಣಿಜ್ಯ ನಗರಿ ಮುಂಬೈನಲ್ಲಿ(Mumbai) ಇಂದು ಬೆಳಗ್ಗೆ ಅಗ್ನಿ ಅವಘಡ(Fire Accident) ಸಂಭವಿಸಿದೆ. 20 ಅಂತಸ್ತಿನ ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 7 ಮಂದಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
Mumbai Fire: ವಾಣಿಜ್ಯ ನಗರಿ ಮುಂಬೈನಲ್ಲಿ(Mumbai) ಇಂದು ಬೆಳಗ್ಗೆ ಅಗ್ನಿ ಅವಘಡ(Fire Accident) ಸಂಭವಿಸಿದೆ. 20 ಅಂತಸ್ತಿನ ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 7 ಮಂದಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
2/ 6
ಶನಿವಾರ ಬೆಳಗ್ಗೆ 7.30ರಲ್ಲಿ ಭಾಟಿಯಾ ಆಸ್ಪತ್ರೆಯ ಪಕ್ಕದಲ್ಲಿರುವ ಕಮಲಾ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದರೆ, ಹಲವರು ಗಾಯಗೊಂಡಿದ್ದಾರೆ.
3/ 6
ಸ್ಥಳಕ್ಕೆ 13 ಅಗ್ನಿ ಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು. ಇನ್ನು, ಘಟನಾ ಸ್ಥಳಕ್ಕೆ 5 ಆ್ಯಂಬುಲೆನ್ಸ್ಗಳು ಆಗಮಿಸಿದ್ದು, ಗಾಯಗೊಂಡವರನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ಸಾಗಿಸುವ ಕೆಲಸ ಭರದಿಂದ ನಡೆದಿದೆ ಎಂದು ಬಿಎಂಸಿ ಹೇಳಿದೆ.
4/ 6
ದುರಂತದಲ್ಲಿ ಗಾಯಗೊಂಡ ವಯಸ್ಸಾದ 6 ಮಂದಿಗೆ ಆಕ್ಸಿಜನ್ ಬೆಂಬಲ ಬೇಕಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಒಟ್ಟು 7 ಮಂದಿ ಬಲಿಯಾಗಿದ್ದಾರೆ. ದಟ್ಟವಾದ ಬೆಂಕಿಯನ್ನು ನಂದಿಸಲಾಗಿದೆ, ಆದರೆ ಸಹ ದಟ್ಟವಾದ ಹೊಗೆ ಇನ್ನೂ ಸಹ ಹಾಗೆಯೇ ಇದೆ.
5/ 6
ಘಟನಾ ಸ್ಥಳದಲ್ಲಿ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ಮಹಾರಾಷ್ಟ್ರದ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಮಂಗಲ್ ಪ್ರಭಾತ್ ಲೋಧಾ ಇದೊಂದು ದುರಾದೃಷ್ಟಕರ ಘಟನೆ ಎಂದು ಹೇಳಿದ್ದಾರೆ.
6/ 6
ಗಾಯಗೊಂಡ 15 ಮಂದಿಯಲ್ಲಿ 12 ಜನರಿಗೆ ಜನರಲ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಇನ್ನುಳಿದ ಮೂವರ ಸ್ಥಿತಿ ತೀರಾ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭಾಟಿಯಾ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.