Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

ಮುಂಬೈ: ಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಆದ ಘಟನೆ ಮುಂಬೈನ ಕರಾವಳಿ ತೀರದಲ್ಲಿ ನಡೆದಿದೆ.

First published:

  • 17

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ನೌಕಾಪಡೆಯ ಈ ಹೆಲಿಕಾಪ್ಟರ್‌ನಲ್ಲಿ ಮೂವರು ಪೈಲಟ್‌ಗಳು ಇದ್ದರು. ತುರ್ತು ಭೂಸ್ಪರ್ಶ ಆದ ಬೆನ್ನಲ್ಲೇ ತಕ್ಷಣ ರಕ್ಷಣಾ ಪಡೆ ನೆರವಿಗೆ ಧಾವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.

    MORE
    GALLERIES

  • 27

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ಭಾರತೀಯ ನೌಕಾಪಡೆ ALH ಮುಂಬೈನಿಂದ ತೀರಕ್ಕೆ ಹತ್ತಿರದಲ್ಲಿದೆ. ಹೀಗಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಆದ ಕೂಡಲೇ ನೌಕಾಪಡೆಯ ಗಸ್ತು ನೌಕೆಯ ಮೂಲಕ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಪೈಲಟ್‌ಗಳನ್ನು ರಕ್ಷಿಸಲಾಗಿದೆ

    MORE
    GALLERIES

  • 37

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ಘಟನೆಯ ಬಗ್ಗೆ ನೌಕಾಪಡೆ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು, ನೌಕಾ ಗಸ್ತು ಕ್ರಾಫ್ಟ್ ಮೂಲಕ ಹೆಲಿಕಾಪ್ಟರ್‌ನಲ್ಲಿದ್ದ ಮೂವರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

    MORE
    GALLERIES

  • 47

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ಅಲ್ಲದೇ, ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ಎಎಲ್‌ಎಚ್‌ ತುರ್ತು ಭೂಸ್ಪರ್ಶ ಆಗಲು ಕಾರಣವೇನು ಅನ್ನೋದು ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    MORE
    GALLERIES

  • 57

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸೇನೆಯ ಶಸ್ತ್ರಸಜ್ಜಿತ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಪತನಗೊಂಡು ಅದರಲ್ಲಿದ್ದ ಐವರು ಸಿಬ್ಬಂದಿ ಮೃತಪಟ್ಟಿದ್ದರು.

    MORE
    GALLERIES

  • 67

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ಈ ಅಪಘಾತದ ನಂತರ, ದೇಶದಲ್ಲಿ ಸೇವೆಯಲ್ಲಿರುವ 300ಕ್ಕೂ ಹೆಚ್ಚು ALH ಗಳನ್ನು ಮುನ್ನೆಚ್ಚರಿಕೆ ಭಾಗಯಾಗಿ ಸುರಕ್ಷತಾ ತಪಾಸಣೆ ನಡೆಸಲಾಗಿತ್ತು.

    MORE
    GALLERIES

  • 77

    Navy Helicopter: ಕರಾವಳಿ ತೀರದಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ!

    ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಆದ ನಂತರ ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    MORE
    GALLERIES