ಆರ್ಥಿಕ ಹಿಂಜರಿತದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸದ್ಯ ಪಾಕಿಸ್ತಾನಕ್ಕೆ ವಿದ್ಯುತ್ ಕೈಕೊಟ್ಟಿದೆ. (ಸಾಂದರ್ಭಿಕ ಚಿತ್ರ)
2/ 7
ಕರಾಚಿ, ಲಾಹೋರ್, ಇಸ್ಲಾಮಾಬಾದ್ ಮತ್ತು ಕ್ವೆಟ್ಟಾ ಸೇರಿದಂತೆ ಪಾಕಿಸ್ತಾನದ ಹಲವಾರು ನಗರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಿದೆ ಎಂದು ವರದಿಗಳು ತಿಳಿಸಿವೆ. (ಸಾಂದರ್ಭಿಕ ಚಿತ್ರ)
3/ 7
ಬಲೂಚಿಸ್ತಾನಕ್ಕೆ ವಿದ್ಯುತ್ ಸರಬರಾಜು ಮಾಡುವ ಎಲ್ಲಾ ಪ್ರಸರಣ ಮಾರ್ಗಗಳು ಟ್ರಿಪ್ ಆಗಿವೆ. ಇದರಿಂದ ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಪವರ್ ಪ್ರಾಬ್ಲಮ್ ಉಂಟಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇತ್ತೀಚಿಗಷ್ಟೇ ಪಾಕಿಸ್ತಾನವು ಪಾಠ ಕಲಿತಿದೆ. ಭಾರತದೊಂದಿಗೆ ಶಾಂತಿಯಿಂದ ಬದುಕಲು ಬಯಸುತ್ತದೆ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ನಾವು ಭಾರತದೊಂದಿಗೆ 3 ಯುದ್ಧಗಳನ್ನು ಮಾಡಿದ್ದೇವೆ. ಆದರೆ ಇದು ನಮ್ಮ ಜನರಿಗೆ ಹೆಚ್ಚಿನ ದುಃಖ, ಬಡತನ ಮತ್ತು ನಿರುದ್ಯೋಗ ಸಮಸ್ಯೆಯನ್ನು ತಂದಿದೆ’ ಎಂದು ಅವರು ಹೇಳಿದ್ದರು. (ಸಾಂದರ್ಭಿಕ ಚಿತ್ರ)
6/ 7
ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಸ್ಥಳೀಯ ಜನರಿಗೆ ಸಮಸ್ಯೆಯ ತಲೆನೋವಾಗಿ ಪರಿಣಮಿಸಿದೆ. (ಸಾಂದರ್ಭಿಕ ಚಿತ್ರ)
7/ 7
ಮದ್ದುಗುಂಡುಗಳ ದಾಳಿಯಿಂದ ಅಮೂಲ್ಯ ಸಂಪನ್ಮೂಲಗಳನ್ನು ವ್ಯರ್ಥ ಮಾಡಬಯಸುವುದಿಲ್ಲ. ಇದು ನಾನು ಪ್ರಧಾನಿ ಮೋದಿಗೆ ಮಾಡುವ ಮನವಿ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮನವಿ ಮಾಡಿದ್ದಾರೆ (ಸಾಂದರ್ಭಿಕ ಚಿತ್ರ)