Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ರಾತ್ರಿ ಕೆಲಸನ ಮುಗಿಸಿ ತನ್ನ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ನಿರೂಪಕಿ ಮಾರ್ವಿಯಾ ಮಲಿಕ್ ಅವರು ಯಾವುದೇ ಪ್ರಾಣಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

First published:

  • 18

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಅಂದ ಹಾಗೆ ಮಾರ್ವಿಯಾ ಮಲಿಕ್ ಅವರು ಪಾಕಿಸ್ತಾನದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಟಿವಿ ಜರ್ನಲಿಸಂ ಕ್ಷೇತ್ರಕ್ಕೆ ಮರಳಿದ್ದಾರೆ.

    MORE
    GALLERIES

  • 28

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಮಾಧ್ಯಮ ಕ್ಷೇತ್ರಕ್ಕೆ ಕಾಲಿಡುವ ಮುನ್ನ ಮಾರ್ವಿಯಾ ಮಲಿಕ್ ಅವರು ಫ್ಯಾಷನ್ ಉದ್ಯಮದಲ್ಲಿ ಕೆಲಸ ಮಾಡಿದ್ದರು. ಟಿವಿ ನಿರೂಪಕಿಯಾದ ನಂತರ ಬಹಳ ಪ್ರಸಿದ್ಧಿಯನ್ನು ಪಡೆದಿದ್ದರು.

    MORE
    GALLERIES

  • 38

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಮಾರ್ವಿಯಾ ಮಲಿಕ್ ಅವರು ಗುರುವಾರ ರಾತ್ರಿ ಲಾಹೋರ್ ಕಂಟೋನ್ಮೆಂಟ್ ಪ್ರದೇಶದಲ್ಲಿ ತನ್ನ ಮನೆಗೆ ಕೆಲಸನ ಮುಗಿಸಿ ಹಿಂತಿರುಗುತ್ತಿದ್ದಾಗ ಅವರು ಬರಲು ಹೊಂಚು ಹಾಕಿ ಕಾಯುತ್ತಿದ್ದ ಗುಂಪು ದಾಳಿ ಮಾಡಿದೆ.

    MORE
    GALLERIES

  • 48

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ದುಷ್ಕರ್ಮಿಗಳು ಗುಂಡು ಹಾರಿಸುತ್ತಿದ್ದಂತೆ ಅಲ್ಲಿಂದ ಓಡಿ ಹೋಗಿ ತಪ್ಪಿಸಿಕೊಂಡ ಮಾರ್ವಿಯಾ ಮಲಿಕ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೂ ಅಪಾಯ ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.

    MORE
    GALLERIES

  • 58

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಪಾಕ್ ಮಾಧ್ಯಮ ವರದಿ ಮಾಡಿರುವ ಪ್ರಕಾರ ಇಬ್ಬರು ಬಂದೂಕುಧಾರಿಗಳು ಮಾರ್ವಿಯಾ ಮಲಿಕ್ ಅವರ ಮೇಲೆ ದಾಳಿ ಮಾಡಿದ್ದಾರೆ. ಮಾರ್ವಿಯಾ ಅವರು ಎಲ್‌ಜಿಬಿಟಿಕ್ಯೂ ಸಮುದಾಯದ ಪರ ಧ್ವನಿಯೆತ್ತಿದ ಕಾರಣಕ್ಕೆ ದಾಳಿ ನಡೆದಿದೆ ಎನ್ನಲಾಗಿದೆ.

    MORE
    GALLERIES

  • 68

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾರ್ವಿಯಾ ಮಲಿಕ್ ಅವರು ಎಲ್‌ಜಿಬಿಟಿಕ್ಯೂ ಸಮುದಾಯದ ಹಕ್ಕುಗಳ ಪರವಾಗಿ ಮಾತನಾಡಿದ್ದರು. ಹೀಗಾಗಿ ಇಸ್ಲಾಂ ಮೂಲಭೂತವಾದಿಗಳು ಅವರ ವಿರುದ್ಧ ಮುಗಿಬಿದ್ದಿದ್ದರು.

    MORE
    GALLERIES

  • 78

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಕೌನ್ಸಿಲ್ ಆಫ್ ಇಸ್ಲಾಮಿಕ್ ಐಡಿಯಾಲಜಿಯ (CII) ಕೆಲವು ನಿಬಂಧನೆಗಳು ಷರಿಯಾ ಕಾನೂನಿಗೆ ವಿರುದ್ಧವಾಗಿರುವುದರಿಂದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಾಯಿದೆ ಇಸ್ಲಾಮಿಕ್ ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದವು.

    MORE
    GALLERIES

  • 88

    Pakistan: ಪಾಕಿಸ್ತಾನದ ಮೊದಲ ಟ್ರಾನ್ಸ್‌ಜೆಂಡರ್‌ ಟಿವಿ ನಿರೂಪಕಿ ಮಾರ್ವಿಯಾ ಮಲಿಕ್ ಮೇಲೆ ಗುಂಡಿನ ದಾಳಿ!

    ಸದ್ಯ ಮಾರ್ವಿಯಾ ಮಲಿಕ್ ಅವರ ಮೇಲೆ ಪುನಃ ದುಷ್ಕರ್ಮಿಗಳು ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಅವರು ತನ್ನ ಮನೆಯನ್ನು ತೊರೆದಿದ್ದಾರೆ.

    MORE
    GALLERIES