ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ 21 ಹೆಸರಿಲ್ಲದ 21 ದ್ವೀಪಗಳಿಗೆ ನಾಮಕರಣ ಮಾಡಲಿದ್ದಾರೆ. (ಸಾಂದರ್ಭಿಕ ಚಿತ್ರ)
2/ 8
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ ಎಂದು ಆಚರಿಸಲು ಈಗಾಗಲೇ ನಿರ್ಧರಿಸಲಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಿರುವ ನೇತಾಜಿಗೆ ಅರ್ಪಿಸಲಾದ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಅನಾವರಣಗೊಳಿಸಲಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ನೇತಾಜಿಯವರ ಗೌರವಾರ್ಥವಾಗಿ ಅಂಡಮಾನ್ ನಿಕೋಬಾರ್ ಪ್ರದೇಶದ ರಾಸ್ ದ್ವೀಪವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು 2018 ರಲ್ಲಿ ಪ್ರಧಾನಿ ಮೋದಿ ಆ ದ್ವೀಪಕ್ಕೆ ಭೇಟಿ ನೀಡಿದಾಗ ಹೆಸರಿಸಿದ್ದರು. (ಸಾಂದರ್ಭಿಕ ಚಿತ್ರ)
5/ 8
ಜೊತೆಗೆ ನೀಲ್ ದ್ವೀಪ ಮತ್ತು ಹ್ಯಾವ್ಲಾಕ್ ದ್ವೀಪವನ್ನು ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿತ್ತು. (ಸಾಂದರ್ಭಿಕ ಚಿತ್ರ)
6/ 8
21 ದ್ವೀಪಗಳಿಗೆ 21 ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. (ಸಾಂದರ್ಭಿಕ ಚಿತ್ರ)
7/ 8
ಅಂಡಮಾನ್ ನಿಕೋಬಾರ್ನ ಇನ್ನೂ ಹೆಸರಿಡದ ಅತಿದೊಡ್ಡ ದ್ವೀಪಕ್ಕೆ ಮೊದಲ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗುತ್ತದೆ. (ಸಾಂದರ್ಭಿಕ ಚಿತ್ರ)
8/ 8
ಅಂಡಮಾನ್ ನಿಕೋಬಾರ್ನ ಎರಡನೇ ಅತಿ ದೊಡ್ಡ ಹೆಸರಿಲ್ಲದ ದ್ವೀಪಕ್ಕೆ ಎರಡನೇ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. (ಸಾಂದರ್ಭಿಕ ಚಿತ್ರ)