Petrol Price: ಒಂದು ಲೀಟರ್ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಗೊತ್ತೇ?
Petrol Diesel Price: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
News18 Kannada | August 6, 2020, 7:03 PM IST
1/ 8
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆ ಆಗುತ್ತಿದೆ. ಆದಾಗ್ಯೂ ಕೇಂದ್ರ ಸರ್ಕಾರ ತೈಲ ದರ ಹೆಚ್ಚಳ ಮಾಡುತ್ತಲೇ ಇದೆ.
2/ 8
ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದೇಪದೇ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಇದೆ.
3/ 8
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
4/ 8
ಬಹಳ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸತ್ಸಂಪ್ರದಾಯವನ್ನು ಮರೆತಿದೆ.
5/ 8
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಆಗುತ್ತಲೇ ಇದೆ.
6/ 8
ಜುಲೈ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.
7/ 8
ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಗುರುವಾರ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
8/ 8
ಇಂದು ದೆಹಲಿ ಸೇರಿದಂತೆ ಯಾವುದೇ ನಗರದಲ್ಲೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಒಂದು ಲೀಟರ್ಗೆ 80.43 ರೂ., ಡೀಸೆಲ್ 73.56 ರೂ. ಇದೆ. ಕೋಲ್ಕತ್ತಾ ಪೆಟ್ರೋಲ್ 82.05 ರೂ., ಡೀಸೆಲ್ 77.06 ರೂ. ಆಗಿದೆ. ಮುಂಬೈ ಪೆಟ್ರೋಲ್- 87.19, ಡೀಸೆಲ್ - 80.11 ಆಗಿದೆ. ಹಾಗೆಯೇ ಚೆನ್ನೈನಲ್ಲಿ ಪೆಟ್ರೋಲ್ 83.63 ರೂ., ಡೀಸೆಲ್ 78.86 ರೂ. ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 83.11 ರೂ., ಡೀಸೆಲ್ 77.88 ರೂ ಇದೆ.