ಮೂರು ದಿನಗಳ ಭೇಟಿಗಾಗಿ ಲಂಡನ್‌ನಲ್ಲಿರುವ ಮುರ್ಮು ಅವರು ಇಲ್ಲಿನ ವೆಸ್ಟ್‌ಮಿನಿಸ್ಟರ್ ಹಾಲ್‌ಗೆ ಭೇಟಿ ನೀಡಿ ಭಾರತ ಸರ್ಕಾರ ಮತ್ತು ಭಾರತದ ಜನತೆಯ ಪರವಾಗಿ ದಿವಂಗತ ರಾಣಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ರಾಷ್ಟ್ರಪತಿಯವರ ಅಧಿಕೃತ ಟ್ವಿಟ್ಟರ್ ಖಾತೆ ರಾಷ್ಟ್ರಪತಿ ಭವನ ಟ್ವೀಟ್ ಮಾಡಿದ್ದು, "ರಾಷ್ಟ್ರಪತಿ ದ್ರೌಪದಿ ಮುರ್ಮು ಲಂಡನ್‌ನ ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ರಾಣಿ ಎಲಿಜಬೆತ್ II ರ ರಾಜ್ಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ" ಅಂತ ಹೇಳಿದೆ.