PHOTOS : ಪ್ರಜಾಪ್ರಭುತ್ವದ ಹಬ್ಬ: ಮತ ಚಲಾಯಿಸಿದ ರಾಜಕೀಯ ಮುಖಂಡರು
8 ರಾಜ್ಯಗಳ 59 ಕ್ಷೇತ್ರಗಳಿಗೆ ನಡೆಯುತ್ತಿರುವ 2019ನೇ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ಸಾಗುತ್ತಿದ್ದು, ದೇಶದ ಹಲವೆಡೆ ಶಾಂತಿಯುತವಾಗಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಬಿಟ್ಟರೆ ಉಳಿದೆಡೆ ಹಿರಿಯರು ಕೂಡ ಮತದಾನದಲ್ಲಿ ಪಾಲ್ಗೊಂಡು ತಮ್ಮ ಕರ್ತವ್ಯವನ್ನು ಪೂರೈಸಿದರು. ಪಾಟ್ನಾ ಸಾಹೀಬ್‌ನ ಕಾಂಗ್ರೆಸ್ ಅಭ್ಯರ್ಥಿ, ನಟ ಶತೃಘ್ನ ಸಿನ್ಹಾ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಸೇರಿದಂತೆ ಘಟಾನುಘಟಿ ನಾಯಕರು ಮತ ಚಲಾಯಿಸಿದರು.