ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಈಗಾಗಲೇ ಫಲಾನುಫವಿ ರೈತರು 10 ಕಂತಿನ ಹಣವನ್ನು ಪಡೆದಿದ್ದಾರೆ. ಇದೀಗ ಕೇಂದ್ರ ಸರ್ಕಾರ 11ನೇ ಕಂತಿನ ಹಣ ಬಿಡುಗಡೆಗೆ ಮುಂದಾಗಿದೆ.
2/ 8
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ 6,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ.
3/ 8
ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ರೈತರ ಖಾತೆಗೆ 2000 ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ತಿಂಗಳಿಗೊಮ್ಮೆ ಅರ್ಹ ರೈತರಿಗೆ 2,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ವರ್ಷಕ್ಕೆ 6,000 ರೂಪಾಯಿಗಳನ್ನು ನೀಡಲಾಗುವುದು
4/ 8
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 11ನೇ ಕಂತಿನ ಹಣ ಪಡೆಯಲು ಈ ಬಾರಿ ಫಲಾನುಫವಿ ರೈತರು ಇ-ಕೆವೈಸಿ ಕಡ್ಡಾಯವಾಗಿ ಮಾಡಬೇಕಿದೆ. ಇಲ್ಲದೇ ಹೋದಲ್ಲಿ ರೈತರು ಈ ಹಣ ಪಡೆಯುವಲ್ಲಿ ವಿಫಲರಾಗಿದ್ದಾರೆ.
5/ 8
ಈ ನಿಟ್ಟಿನಲ್ಲಿ ರೈತರಿಗೆ ಅನುಕೂಲವಾಗಲಿ ಎಂದು ಇ-ಕೆವೈಸಿ ಭರ್ತಿಗೆ ಕೇಂದ್ರ ವಿಧಿಸಿದ್ದ ಗಡವನನು ವಿಸ್ತರಣೆ ಮಾಡಲಾಗಿದೆ. ಈ ಮೊದಲು ಮಾರ್ಚ್ 31ಇದ್ದ ಈ ಗಡವು ಮೇ. 22. 2022ಕ್ಕೆ ಮುಂದೂಡಲಾಗಿದೆ.
6/ 8
ಈ ಯೋಜನೆಯನ್ನು ರೈತರ ಆಧಾರ್ ವಿವರಗಳೊಂದಿಗೆ ಲಿಂಕ್ ಮಾಡುವುದು ಕಡ್ಡಾಯ ಜೊತೆಗೆ ಈ ದಾಖಲೆಯಲ್ಲಿ ಈ ಯೋಜನೆಯನ್ನು ರೈತರ ಆಧಾರ್ ವಿವರಗಳೊಂದಿಗೆ ಲಿಂಕ್ ಮಾಡಲಾಗಿದೆ.
7/ 8
ಫಲಾನುಭವಿ ರೈತರ ಇ ಕೆವೈಸಿ ಮುಗಿದ ಬಳಿಕ ಜೂನ್ ಅಥವಾ ಜುಲೈ ತಿಂಗಳಿನಲ್ಲಿ 11ನೇ ಕಂತಿನ ಹಣ ಬಿಡುಗಡೆಯಾಗುವ ನಿರೀಕ್ಷೆ ಇದೆ
8/ 8
ಕಳೆದ ಡಿಸೆಂಬರ್ನಲ್ಲಿ ಕೇಂದ್ರ ಸರ್ಕಾರ 10ನೇ ಕಂತಿನ ಹಣವನ್ನು ರೈತ ಖಾತೆಗೆ ನೇರವಾಗಿ ಜಮೆ ಮಾಡುವ ಮೂಲಕ ಅವರಿಗೆ ಆರ್ಥಿಕ ನೆರವನ್ನು ನೀಡಿತು.