ಬುಧವಾರ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ (Border-Gavaskar Trophy) ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ (ICC World Test Championship) ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ವೀಕ್ಷಣೆ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟವನ್ನು ಮೈದಾನದಲ್ಲಿ ಕುಳಿತು ವೀಕ್ಷಣೆ ಮಾಡಲಿದ್ದಾರೆ. ಈಗಾಗಲೇ ಪೊಲೀಸ್ ಪಡೆ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಯನ್ನು ಪೂರ್ಣಗೊಳಿಸಿದೆ. ಭದ್ರತೆಗಾಗಿ 200 ಪೊಲೀಸ್ ಅಧಿಕಾರಿಗಳು ಹಾಗೂ 3,000 ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ಎಂದು ಉನ್ನತ ಪೊಲೀಸ ಅಧಿಕಾರಿ ತಿಳಿಸಿದ್ದಾರೆ..
ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಬುಧವಾರವೇ ಗುಜರಾತ್‌ನ ಅಹಮದಾಬಾದ್‌ಗೆ ಆಗಮಿಸಲಿದ್ದಾರೆ. ಅಲ್ಬನೀಸ್ ಇಂದು ಇಲ್ಲಿಯ ಪಂಚತಾರಾ ಹೋಟೆಲ್‌ನಲ್ಲಿ ಆಸ್ಟ್ರೇಲಿಯಾ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಲಿದ್ದಾರೆ. ನಾಳೆ ಇಬ್ಬರು ಗಣ್ಯರು ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಿ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಟೆಸ್ಟ್ ಸರಣಿಯಲ್ಲಿ ಭಾರತ 2-1ರಲ್ಲಿ ಮುನ್ನಡೆ ಕಾಪಾಡಿಕೊಂಡಿದೆ, ಆದರೆ ಮೊದಲೆರಡು ಟೆಸ್ಟ್ಗಳನ್ನು ಸುಲಭವಾಗಿ ಭಾರತ, 3ನೇ ಟೆಸ್ಟ್ ನಲ್ಲಿ ಹೀನಾಯ ಪ್ರದರ್ಶನ ತೋರಿ ಸೋಲು ಕಂಡಿದೆ, ಈಗಾಗಲೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸಿದೆ. ಇದೀಗ ಅಹ್ಮದಾಬಾದ್ ಟೆಸ್ಟ್ ಪಂದ್ಯವನ್ನು ಗೆದ್ದರೆ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಒಂದು ವೇಳೆ ಸೋಲು ಕಂಡರೆ ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ಟೆಸ್ಟ್ ಸರಣಿ ಫಲಿತಾಂಶ ಅವಲಂಬಿಸಬೇಕಾಗುತ್ತದೆ.