ತಾಯಿ ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ನಾಳೆ ದೇಶಾದ್ಯಂತ ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್‌ 144ನೇ ಜನ್ಮದಿನಾಚರಣೆ ಮಾಡಲಾಗುತ್ತಿದೆ. ಸರ್ದಾರ್ ಪಟೇಲ್‌ ಜನ್ಮದಿನದ ಅಂಗವಾಗಿ ಕೇಂದ್ರ ಸರ್ಕಾರ ಏಕತಾ ದಿವಸ್​ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯರು ಗುಜರಾತ್‌ನ ನರ್ಮದಾ ನದಿ ತೀರದಲ್ಲಿರುವ ಏಕತಾ ಪ್ರತಿಮೆಗೆ ನಾಳೆ ಗೌರವ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಅವರು ಗುಜರಾತ್​ಗೆ ತೆರಳಿದ್ದಾರೆ. ಈ ವೇಳೆ ಗಾಂಧಿನಗರದಲ್ಲಿರುವ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

First published: