ಜಿ20 ಶೃಂಗಸಭೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಮೆರಿಕ ಅಧ್ಯಕ್ಷ ಜೋ ಬಿಡನ್ (US President Joe Biden) ಸೇರಿದಂತೆ ವಿಶ್ವ ನಾಯಕರೊಂದಿಗೆ ಸಂವಾದ ನಡೆಸಿದರು. ಸಂತೋಷವನ್ನು ವಿನಿಮಯ ಮಾಡಿಕೊಂಡರು ಮತ್ತು ಸೌಹಾರ್ದತೆಯ ಮನೋಭಾವವನ್ನು ಪ್ರದರ್ಶಿಸಿದರು.
2/ 5
ಪಿಎಂಒ ಇಂಡಿಯಾ ಟ್ವೀಟ್ ಮಾಡಿದ ಸರಣಿ ಫೋಟೋಗಳಲ್ಲಿ, ಪ್ರಧಾನಿ ಮೋದಿ ಅವರು ಜೋ ಬಿಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ಕಾಣಬಹುದು.
3/ 5
ಪ್ರಧಾನಿ ಮೋದಿ ಮತ್ತು ಪೋಪ್ ಫ್ರಾನ್ಸಿಸ್ ನಡುವೆ ಅತ್ಯಂತ ಆತ್ಮೀಯ ಭೇಟಿಯಾದರು. ಬರೀ ಇಪ್ಪತ್ತು ನಿಮಿಷಕ್ಕೆ ನಿಗದಿಯಾಗಿದ್ದ ಮೀಟಿಂಗ್ ಒಂದು ತಾಸು ನಡೆಯಿತು.
4/ 5
ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಬಡತನವನ್ನು ಹೋಗಲಾಡಿಸುವಂತಹ ನಮ್ಮ ಗ್ರಹವನ್ನು ಉತ್ತಮಗೊಳಿಸುವ ಉದ್ದೇಶದಿಂದ ಪಿಎಂ ಮೋದಿ ಮತ್ತು ಪೋಪ್ ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸಿದರು. ಪೋಪ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಆಹ್ವಾನ ನೀಡಿದರು.
5/ 5
1999 ರಲ್ಲಿ ಅಟಲ್ ಜಿ ಪ್ರಧಾನಿಯಾಗಿದ್ದಾಗ ಪೋಪ್ ಜಾನ್ ಪಾಲ್ II ಬಂದಾಗ ಕೊನೆಯ ಬಾರಿಗೆ ಪೋಪ್ ಭೇಟಿ ನಡೆದಿತ್ತು ಎಂಬುದನ್ನು ಸ್ಮರಿಸಬಹುದು. ಈಗ ಪ್ರಧಾನಿ ಮೋದಿಯವರ ಪ್ರಧಾನಿ ಅವಧಿಯಲ್ಲಿ ಪೋಪ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಲಾಗಿದೆ.