ಇನ್ನು ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ನಿರ್ಮಾಣ ಮಾಡುವಂತೆ ಬಿಜೆಪಿ ನಾಯಕರೂ ಆಗಿರುವ ಚಂದ್ರಬೋಸ್ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದರು. ದೆಹಲಿಯ ಇಂಡಿಯಾ ಗೇಟ್ ಎದುರು ನೇತಾಜಿ ಅವರ ಪ್ರತಿಮೆ ಸ್ಥಾಪಿಸುವಂತೆ ಕೋರಿ ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದರು. ಕರೆನ್ಸಿ ನೋಟುಗಳ ಮೇಲೆ ನೇತಾಜಿ ಅವರ ಚಿತ್ರವನ್ನು ಮುದ್ರಿಸಲು ಮತ್ತು ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಕೂಡ ಇದೇ ವೇಳೆ ಕೋರಿದ್ದರು.