ಮಾರ್ಚ್ 19ರಂದು ಹೈದರಾಬಾದ್ನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿಶನ್ ರೆಡ್ಡಿ, ವಂದೇ ಭಾರತ್ ರೈಲಿನ ಬಗ್ಗೆಯೂ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. “ಮುಂದಿನ ತಿಂಗಳು ಸಿಕಂದರಾಬಾದ್ನಲ್ಲಿ ನೂತನ ಕಟ್ಟಡಗಳ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. ಶೀಘ್ರದಲ್ಲೇ ಹೈದರಾಬಾದ್ನಿಂದ ತಿರುಪತಿಗೆ ಇನ್ನೊಂದು ವಂದೇ ಭಾರತ್ ರೈಲು ಆರಂಭಿಸಲಾಗುವುದು” ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಿಳಿಸಿದ್ದಾರೆ.