(PHOTOS): ವಾರಾಣಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಕೇಂದ್ರದ ಗದ್ದುಗೆ ಏರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಒಕ್ಕೂಟ ಭಾರಿ ಕಸರತ್ತು ನಡೆಸುತ್ತಿದೆ. ನಾಳೆ ಪ್ರಧಾನಿ ಮೋದಿ ಅವರು ನಾಮಪತ್ರ ಸಲ್ಲಿಸಲಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸ್ವಕ್ಷೇತ್ರ ವಾರಾಣಸಿಯಲ್ಲಿ ಗುರುವಾರ ಸಂಜೆ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು. ಪ್ರಧಾನಿ ರೋಡ್ ಶೋನಲ್ಲಿ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ಪ್ರಧಾನಿ ಅವರ ಈ ರೋಡ್ ಶೋ ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ