ವಿವಿಧ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಲು ನೂತನ ಸಂಸತ್ ಕಟ್ಟಡಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಲ್ಲಿಯೇ ಕಳೆದಿದ್ದಾರೆ.
2/ 10
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ಸಂಸತ್ ಭವನ ಕಟ್ಟಡಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದರು.
3/ 10
2020ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೂತನ ಸಂಸತ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿತ್ತು. ಅಂದಿನಿಂದ ಸಂಸತ್ ಭವನ ನಿರ್ಮಾಣದ ಕಾಮಗಾರಿ ಭರದಿಂದ ಸಾಗುತ್ತಿದೆ.
4/ 10
ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಸಂಕೀರ್ಣಕ್ಕೆ ದಿಢೀರ್ ಭೇಟಿ ನೀಡುತ್ತಿರೋದು ಇದೇ ಮೊದಲಲ್ಲ. ಈ ಹಿಂದೆಯೂ 2021ರಲ್ಲಿ ಭೇಟಿ ನೀಡಿದ್ದರು.
5/ 10
2021ರ ಸೆಪ್ಟೆಂಬರ್ ತಿಂಗಳಲ್ಲಿ ನೂತನ ಸಂಸತ್ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಜೊತೆಗೆ ಪ್ರಧಾನಿ ಮೋದಿ ಸಂವಾದವನ್ನೂ ನಡೆಸಿದ್ದರು.
6/ 10
ಕಳೆದ ಮೂರು ವರ್ಷಗಳಿಂದ ನೂತನ ಸಂಸತ್ ಭವನ ಕಟ್ಟಡದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಈ ಕಟ್ಟಡ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.
7/ 10
ನೂತನ ಸಂಸತ್ ಭವನದ ಬಗ್ಗೆ ಇತ್ತೀಚೆಗೆ ಮಾತನಾಡಿದ್ದ ಮೋದಿ, ‘ಹೊಸ ಸಂಸತ್ ಭವನದ ಅಗತ್ಯ ಹಲವು ವರ್ಷಗಳಿಂದ ಇತ್ತು. 21 ನೇ ಶತಮಾನದ ಭಾರತಕ್ಕೆ ಹೊಸ ಸಂಸತ್ತಿನ ಸಂಕೀರ್ಣದ ಅಗತ್ಯವಿದೆ’ ಎಂದು ಹೇಳಿದ್ದರು.
8/ 10
ಅಲ್ಲದೇ, ಹಳೆಯ ಕಟ್ಟಡವು ದೇಶದ ಅಗತ್ಯಗಳನ್ನು ಪೂರೈಸಿದೆ, ಹೊಸ ಸಂಸತ್ತಿನ ಕಟ್ಟಡವು ದೇಶದ ಆಕಾಂಕ್ಷೆಗಳನ್ನು ಪೂರೈಸುತ್ತದೆ ಎಂದು ಮೋದಿ ಹೇಳಿದ್ದರು.
9/ 10
ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿರುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
10/ 10
ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ಕಾಮಗಾರಿ ವೀಕ್ಷಣೆ ಮಾಡುತ್ತಿರುವುದು
First published:
110
Narendra Modi: ನೂತನ ಸಂಸತ್ ಭವನ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದ ಪ್ರಧಾನಿ ಮೋದಿ!