ಆದರೆ, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಈವರೆಗೂ ತನಗೆ ಅಂತಹ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದ್ದಾರೆ. 2004 ರಲ್ಲಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಮೊದಲ ಬಾರಿಗೆ ರಾಹುಲ್ ಗಾಂಧಿ ಲೋಕಸಭೆಯ ಸಂಸದರಾಗಿ ಆಯ್ಕೆಯಾಗಿದ್ದರು. ಅಲ್ಲಿಂದ ಸತತ ನಾಲ್ಕನೇ ಬಾರಿ ಸಂಸದರಾಗಿದ್ದು, ಸರ್ಕಾರಿ ಬಂಗಲೆಯಲ್ಲೇ ಇದ್ದಾರೆ.