(PHOTOS) : ರಾಹುಲ್ ಗಾಂಧಿ ನೇತೃತ್ವದಲ್ಲಿ ಸಿಬಿಐ ಕಚೇರಿ ಮುತ್ತಿಗೆ
ಸಿಬಿಐ ಮುಖ್ಯಸ್ಥ ಹಾಗೂ ಉಪಮುಖ್ಯಸ್ಥರ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳನ್ನೂ ಕೇಂದ್ರ ಸರ್ಕಾರ ರಾತ್ರೋರಾತ್ರಿ ಕಡ್ಡಾಯ ರಜೆ ಮೇಲೆ ಕಳುಹಿಸಿ, ಸಿಬಿಐಗೆ ಹಂಗಾಮಿ ನಿರ್ದೇಶಕರನ್ನಾಗಿ ನಾಗೇಶ್ವರ್ ರಾವ್ ಅವರನ್ನು ನೇಮಿಸಿದೆ.
ಕೇಂದ್ರ ಸರ್ಕಾರ ಮಧ್ಯರಾತ್ರಿ ತೆಗೆದುಕೊಂಡ ನಿರ್ಧಾರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ರಜೆ ಮೇಲೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆಯ ಚಿತ್ರಗಳು ಇಲ್ಲವೆ ನೋಡಿ..