ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್​​ರ ಅಪರೂಪದ ಚಿತ್ರಗಳು

ದೆಹಲಿಯ ಮಾಜಿ ಸಿಎಂ ಹಾಗೂ ಕಾಂಗ್ರೆಸ್​ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷವಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ಇಂದು ನಿನ್ನೆ ಅವರನ್ನ Fortis Escorts heart institute ಆಸ್ಪತ್ರೆಗೆ ಸೇರಿಸಲಾಗಿತ್ತು. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಕೂಡ ಇವರು ಸ್ಪರ್ಧಿಸಿದ್ದ ಅವರು, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಪರಾಭವಗೊಂಡಿದ್ದರು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವಾರು ಏರುಪೇರು ಕಂಡಿದ್ದ ಅವರು, ಪಕ್ಷಾತೀತವಾಗಿ ರಾಜಕೀಯ ವಲಯದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು. ಅಲ್ಲದೇ ಮೂರು ಬಾರಿ ದೆಹಲಿಯ ಸಿಎಂ ಸೇವೆ ಸಲ್ಲಿಸಿದ್ದರು. 

  • News18
  • |
First published: