ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಈ ದಾರುಣ ಘಟನೆ ನಡೆದಿದ್ದು, ಈ ಭೀಕರ ಅಪಘಾತದಲ್ಲಿ ಮೃತಪಟ್ಟ ಆರು ಜನರ ಪೈಕಿ ಒಂದು ಮಗು ಮತ್ತು ಮಹಿಳೆಯೂ ಸೇರಿದ್ದಾರೆ.
2/ 7
20ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನ ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
3/ 7
12ಕ್ಕೂ ಹೆಚ್ಚು ಜನರು ಈ ಅಪಘಾತದಲ್ಲಿ ಗಾಯಗೊಂಡಿದ್ದು, ಗಾಯಾಳುಗಳೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
4/ 7
ಪಲಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಡಾ ಸೇತುವೆ ಬಳಿ ಈ ಅಪಘಾತ ಸಂಭವಿಸಿದ್ದರಿಂದ ಸ್ಥಳಕ್ಕೆ ಬಲೋಡಾ ಬಜಾರ್ ಎಸ್‌ಎಸ್‌ಪಿ ದೀಪಕ್ ಝಾ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
5/ 7
ಇನ್ನು ಈ ಭೀಕರ ಅಪಘಾತಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ಥಳೀಯರೂ ಪಾಲ್ಗೊಂಡಿದ್ದಾರೆ.
6/ 7
ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಸಂಬಂಧಿತರಿಗೆ ಅಗತ್ಯ ಇರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಹೇಳಿದ್ದಾರೆ.
7/ 7
ಇದೇ ಫೆಬ್ರವರಿಯಲ್ಲಿ ಛತ್ತೀಸ್‌ಗಢದ ಜಂಜ್ ಗಿರ್-ಚಂಪ ಜಿಲ್ಲೆಯ ಸಂಕರ್ ಗ್ರಾಮದ ಸಮೀಪ ವೇಗವಾಗಿ ಬರುತ್ತಿದ್ದ ಟ್ರಾಕ್ಟರ್ ಟ್ರಾಲಿ ಮಗುಚಿಬಿದ್ದು ಇಬ್ಬರು ಮೃತಪಟ್ಟು 12 ಮಂದಿ ಗಾಯಗೊಂಡಿದ್ದರು
First published:
17
Road Accident: ಟ್ರಕ್-ಪಿಕಪ್ ಮಧ್ಯೆ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಸ್ಥಳದಲ್ಲೇ ಸಾವು!