Sabarimala: ಶಬರಿಮಲೆಗೆ ತೆರಳುವ ಭಕ್ತರ ಗಮನಕ್ಕೆ; ಅಯ್ಯಪ್ಪಸ್ವಾಮಿ ದರ್ಶನಕ್ಕೆ ಹೊಸ ರೂಲ್ಸ್!
ತಿರುವನಂತಪುರ: ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದು, ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ. ಈ ಹಿನ್ನೆಲೆ ಕೇರಳ ಸರ್ಕಾರ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ.
ಈಗಾಗಲೇ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ತಂಡೋಪ ತಂಡವಾಗಿ ಭಕ್ತರು ಶಬರಿಮಲೆಗೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಭಕ್ತರ ದಂಡು ಕೂಡ ಹರಿದು ಬರ್ತಿದೆ.
2/ 8
ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ದಿನಕ್ಕೆ 90 ಸಾವಿರ ಮಂದಿ ಭಕ್ತರಿಗಷ್ಟೇ ದೇವರ ದರ್ಶನಕ್ಕೆ ಅವಕಾಶ ನೀಡಲು ಕೇರಳ ಸರ್ಕಾರ ನಿರ್ಧಾರ ಮಾಡಿದೆ.
3/ 8
ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ದೇವರ ದರ್ಶನ ಸಮಯವನ್ನು 1 ಗಂಟೆ ವಿಸ್ತರಿಸಲಾಗಿದೆ.
4/ 8
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
5/ 8
ಭಕ್ತರ ಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಎಂದು ಕೇರಳ ಹೈಕೋರ್ಟ್ ಭಾನುವಾರ ಪತ್ತನಂತ್ತಿಟ್ಟ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿತ್ತು.
6/ 8
ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
7/ 8
ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ರಾಜ್ಯದಿಂದಲೂ ಲಕ್ಷಾಂತರ ಜನರು ದೇಗುಲಕ್ಕೆ ಭೇಟಿ ನೀಡುತ್ತಾರೆ.
8/ 8
ತೀರ್ಥಯಾತ್ರೆ ಕಾರ್ತಿಕ ಮಾಸ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಮಕರ ಸಂಕ್ರಾತಿ ಬಳಿಕ ಚಳಿಗಾಲದ ಮಾಸದಲ್ಲಿ ಕೊನೆಯಾಗುತ್ತದೆ.