Photos | ಗಣ್ಯರನ್ನು ಭೇಟಿಯಾಗಿ, ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಶಿವಸೇನೆ

ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆಗೂಡಿ ಕಾಂಗ್ರೆಸ್​​-ಎನ್​​ಸಿಪಿ ಮೈತ್ರಿಯೂ ಮಹಾ ವಿಕಾಸ್ ಆಘಾಡಿ ಮೈತ್ರಿಕೂಟದ ಸರ್ಕಾರ ರಚಿಸಿದ್ದು,  ನೂತನ ಮುಖ್ಯಮಂತ್ರಿಯಾಗಿ ಇಂದು ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶಿವಸೇನೆಗೆ 16, ಎನ್​​ಸಿಪಿಗೆ 15 ಮತ್ತು ಕಾಂಗ್ರೆಸ್​​ಗೆ 13 ಮಂತ್ರಿ ಸ್ಥಾನ ಸಿಗಲಿದೆ. ಸಿಎಂ ಆಗಲಿರುವ ಉದ್ದವ್​​ ಠಾಕ್ರೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಅದೇ ರೀತಿಯಲ್ಲಿ ಶಿವಸೇನೆಯ ಶಾಸಕ ಆದಿತ್ಯ ಠಾಕ್ರೆ ಸಮಾರಂಭಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್​​​ ಸಿಂಗ್​ ಅವರುಗಳಿಗೆ ಆಹ್ವಾನ ನೀಡಿದ್ದಾರೆ.

First published: