(Photos) ಅಮೇಥಿಯಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಹೋಮದಲ್ಲಿ ಭಾಗಿಯಾದ ಸ್ಮೃತಿ ಇರಾನಿ
ಅಮೇಥಿ ಕ್ಷೇತ್ರದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ನಾಮಪತ್ರ ಸಲ್ಲಿಕೆ ಬಳಿಕ ಇಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರಸಲ್ಲಿಕೆಗೂ ಮುನ್ನ ಅವರು ಹೋಮ ಹವನದಲ್ಲಿ ಭಾಗಿಯಾಗಿದ್ದಾರೆ. ಇದಾದ ಬಳಿಕ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಐದನೇ ಹಂತದ ಮತದಾನ ಮೇ 6ರಂದು ನಡೆಯಲಿದೆ. ನೆನ್ನೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ 18 ಕೊನೇ ದಿನವಾಗಿದೆ.